Thursday, December 2, 2021
spot_img
Homeಸ್ಥಳೀಯ ಸುದ್ದಿಕಾರ್ಕಳ : ಬಾವಿಗೆ ಹಾರಿ ಆತ್ಮಹತ್ಯೆ

ಕಾರ್ಕಳ : ಬಾವಿಗೆ ಹಾರಿ ಆತ್ಮಹತ್ಯೆ

ಕಾರ್ಕಳ : ಯುವಕನೋರ್ವ ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದಿಂದ ವರದಿಯಾಗಿದೆ. ಸತೀಶ್ ಕುಲಾಲ್ (33) ಎಂಬವರೇ ಆತ್ಮಹತ್ಯೆಗೆ ಶರಣಾದ ಯುವಕ. ಕಳೆದ 1 ವರ್ಷದಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು ಅವರಿಗೆ ಹಲವು ಸಮಯದಿಂದ ಚಿಕಿತ್ಸೆ ನೀಡಲಾಗಿತ್ತು ‌. ಅವರು ಆಗಾಗ ಮನೆಬಿಟ್ಟು ಹೋಗಿ ಮರಳಿ ಮನೆಗೆ ಬರುತ್ತಿದ್ದರು. ಆದರೆ, ಮಂಗಳವಾರ ರಾತ್ರಿ ಮಲಗಿದ್ದ ನಂತರ ಎದ್ದು ಹೊರಗಡೆ ಹೋದವರು ನಾಪತ್ತೆಯಾಗಿದ್ದರು. ಬಳಿಕ ಮನೆಯವರು ಹುಡುಕಾಟ ನಡೆಸಿದಾಗ ವ್ಯಾಘ್ರ ಚಾಮುಂಡಿ ದೈವಸ್ಥಾನದ ಬಾವಿಯಲ್ಲಿ ಸತೀಶ್‌ ಅವರ ಶವ ಪತ್ತೆಯಾಗಿದೆ. ಈ ಕುರಿತು ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!