Tuesday, December 7, 2021
spot_img
Homeಸ್ಥಳೀಯ ಸುದ್ದಿಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಮಹಾ ಶಕ್ತಿ ಕೇಂದ್ರದ ನೂತನ ಪದಾಧಿಕಾರಿಗಳ ಆಯ್ಕೆ

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಮಹಾ ಶಕ್ತಿ ಕೇಂದ್ರದ ನೂತನ ಪದಾಧಿಕಾರಿಗಳ ಆಯ್ಕೆ

ಕಾರ್ಕಳ : ಹೆಬ್ರಿ /ಚಾರ ಬಿಜೆಪಿ ಮಹಾ ಶಕ್ತಿ ಕೇಂದ್ರ ಮತ್ತು ಇದರ ವ್ಯಾಪ್ತಿಯ 9 ಗ್ರಾಮಗಳ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಆ. 26ರಂದು ಹೆಬ್ರಿಯಲ್ಲಿ ನಡೆಯಿತು.

ಪಕ್ಷದ ಹಿರಿಯ ಮುಖಂಡ ಗುರುದಾಸ್ ಶೆಣೈ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಕಳ ಮಂಡಲದ ಅಧ್ಯಕ್ಷ ರಮಾನಂದ ನಲ್ಲೂರು ‍ಅಧ್ಯಕ್ಷತೆ ವಹಿಸಿದ್ದರು. ಹೆಬ್ರಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಮೇಶ್ ಪೂಜಾರಿ, ಬಿಜೆಪಿ ಹಿಂ.ವ.ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಜ್ಯೋತಿ ಹರೀಶ್, ಹೆಬ್ರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲತಿ, ಹೆಬ್ರಿ ಮಹಾ ಶಕ್ತಿ ಕೇಂದ್ರದ ನೂತನ ಅಧ್ಯಕ್ಷ ರತ್ನಾಕರ್ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಿಜೆಪಿ ಹಿಂ. ವ. ಮೋರ್ಚಾದ ಪ್ರಧಾನ ಕಾರ್ಯದರ್ಶಿ ದಿವಾಕರ ಬಂಗೇರರವರು ನೂತನ ಪದಾಧಿಕಾರಿಗಳ ಹೆಸರನ್ನು ಘೋಷಿಸಿದರು.

ಬಿಜೆಪಿ ಹಿಂ.ವ.ಮೋರ್ಚಾದ ಮಂಡಲ ಉಪಾಧ್ಯಕ್ಷ ಸದಾನಂದ ಕೆರ್ವಾಶೆ ಸ್ವಾಗತಿಸಿ, ಬಿಜೆಪಿ ಹಿಂ.ವ. ಮೋರ್ಚಾದ ತಾಲೂಕು ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಪೂಜಾರಿ ಎರ್ಲಪಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮರ್ಣೆ ಮಹಾಶಕ್ತಿ ಕೇಂದ್ರದ ಬಿಜೆಪಿ ಹಿಂ.ವ.ಮೋರ್ಚಾದ ತಾಲೂಕು ಉಪಾಧ್ಯಕ್ಷ ರಾಮಚಂದ್ರ ನಾಯಕ್ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!