Thursday, December 2, 2021
spot_img
Homeಸ್ಥಳೀಯ ಸುದ್ದಿ16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಆಂಧ್ರ ಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿದ ಕಾರ್ಕಳ ನಗರ ಠಾಣೆ ಪೊಲೀಸರು

ಕಾರ್ಕಳ : ವ್ಯಕ್ತಿಯೋರ್ವರಿಗೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಕೇಸ್‌ ದಾಖಲಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದು ಆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾರ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. 2005 ಅ. 24ರಂದು ನಕ್ರೆ ಚರ್ಚ್‌ ಬಳಿ ಕುಕ್ಕುಂದೂರು ಗ್ರಾಮದ ನಕ್ರೆ ಮಾಣಿಗುಡ್ಡೆ ಆನಂದ ಎಂಬವರಿಗೆ ನಕ್ರೆ ಸಮೀದ ಬೋಪಾಡಿ ಮನೋಹರ ಎಂಬಾತನು ಜಲ್ಲಿ ಕಲ್ಲಿನಿಂದ ಹಲ್ಲೆ ನಡೆಸಿ ಗಾಯಗೊಳಿಸಿದ್ದು, ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಆರೋಪಿ ಮನೋಹರನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಯು ಬಳಿಕ ನ್ಯಾಯಾಲಯದಿಂದ ಜಾಮೀನು ಮೇರೆಗೆ ಬಿಡುಗಡೆಗೊಂಡಿದ್ದನು. ಅನಂತರ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು. ಆರೋಪಿ ಆಂಧ್ರ ಪ್ರದೇಶದಲ್ಲಿರುವ ಕುರಿತು ಸುಳಿವು ಪಡೆದ ಕಾರ್ಕಳ ನಗರ ಠಾಣೆ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾರ್ಕಳ ಡಿವೈಎಸ್ಪಿ ಎಸ್. ವಿಜಯಪ್ರಸಾದ್ ರವರ ಮಾರ್ಗದರ್ಶನದಲ್ಲಿ ಕಾರ್ಕಳ ಸಿಪಿಐ ಸಂಪತ್ ಕುಮಾರ್, ಕಾರ್ಕಳ ನಗರ ಠಾಣಾ ಎಸ್ ಐ ಮಧು ಬಿ.ಇ., ಅಪರಾಧ ವಿಭಾಗದ ಎಸ್‌ಐ ದಾಮೋದರ ಕೆ.ಬಿ., ನೇತೃತ್ವದಲ್ಲಿ ಕಾರ್ಕಳ ನಗರ ಠಾಣಾ ಎಎಸ್ಐ ರಾಜೇಶ್, ಹೆಚ್‌ ಸಿ ಸಂಜಯ್, ಘನಶ್ಯಾಮ್ ಆರೋಪಿಯನ್ನು ಬಂಧಿಸಿ, ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ನ್ಯಾಯಾಲಯವು ಆರೋಪಿ ಮನೋಹರನಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!