Saturday, October 16, 2021
spot_img
Homeಸ್ಥಳೀಯ ಸುದ್ದಿಮಹಿಳಾ ದೌರ್ಜನ್ಯ ವಿರುದ್ಧ ಹೆಬ್ರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

ಮಹಿಳಾ ದೌರ್ಜನ್ಯ ವಿರುದ್ಧ ಹೆಬ್ರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ


ಕಾರ್ಕಳ : ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆಸಿದ ಅತ್ಯಾಚಾರ ಅಮಾನವೀಯ ಕೃತ್ಯವಾಗಿದ್ದು ಇದನ್ನು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಖಂಡಿಸುತ್ತದೆ. ಈ ಘಟನೆ ನಡೆದು 48 ಗಂಟೆಗಳ ಬಳಿಕವೂ ಪೊಲೀಸ್ ಇಲಾಖೆ ಎಫ್ ಐಆರ್ ದಾಖಲಿಸದೇ ದೂರು ನೀಡಿದರೂ ಕರ್ತವ್ಯಲೋಪ ಎಸಗಿದೆ. ವಿದ್ಯಾರ್ಥಿನಿಯರು, ಮಹಿಳೆಯರು ಸೇರಿದಂತೆ ಜನಸಾಮಾನ್ಯರಿಗೆ ಈ ಸರಕಾರದಿಂದ ನ್ಯಾಯ ದೊರಕುತ್ತಿಲ್ಲ. ಕಾನೂನು ಸುವ್ಯವಸ್ಥೆ ಹದಗೆಟ್ಟು ಸರಕಾರದ ಮೇಲೆ ನಂಬಿಕೆ ಕಳೆದುಕೊಳ್ಳುವಂತಾಗಿದೆ. ಮೈಸೂರಲ್ಲಿ ನಡೆದ ಘಟನೆ ಮರುಕಳಿಸದಂತೆ ರಾಜ್ಯಪಾಲರು ಕಾನೂನು ಕ್ರಮ ಕೈಗೊಳ್ಳಬೇಕೆಂದು ಎಂದು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಆಗ್ರಹಿಸಿದರು.

ಶನಿವಾರ ಹೆಬ್ರಿಯ ಬ್ಲಾಕ್ ಕಾಂಗ್ರೆಸ್ ಕಚೇರಿ ಎದುರುಗಡೆ ರಾಜ್ಯ ಸರಕಾರದ ಕಾನೂನು ಸುವ್ಯವಸ್ಥೆ ಬಗ್ಗೆ ಪ್ರತಿಭಟನೆ ನಡೆಸಿ ಮಾತನಾಡಿದರು.

ಸಂಸದೆ ಮಾತನಾಡುತ್ತಿಲ್ಲ
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮಹಿಳೆಯರ ಹಾಗೂ ವಿದ್ಯಾರ್ಥಿಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಮೈಸೂರಿನ ಪ್ರಕರಣದ ಬಗ್ಗೆ ಕೇಂದ್ರ ಸಚಿವೆ ಉಡುಪಿ ಜಿಲ್ಲಾ ಸಂಸದೆ ಶೋಭಾ ಕರಂದ್ಲಾಜೆ ಮಾತನಾಡುತ್ತಿಲ್ಲ. ರಾಜ್ಯದ ಗೃಹ ಸಚಿವರು ಬಾಯಿಗೆ ಬಂದ ಹಾಗೆ ಹಗುರವಾಗಿ ಮಾತನಾಡುತ್ತಾರೆ. ಇನ್ನಾದರೂ ಮೈಸೂರಿನಲ್ಲಿ ನಡೆದ ಪ್ರಕರಣದ ಬಗ್ಗೆ ಗಂಭೀರವಾಗಿ ತನಿಖೆ ನಡೆಸಿ. ಗೃಹ ಸಚಿವರು ತಮ್ಮ ಘನತೆಯನ್ನು ಕಾಪಾಡಿಕೊಳ್ಳಲಿ ಎಂದು ಹೇಳಿದರು .
ಹೆಬ್ರಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಂಜನಿ ಹೆಬ್ಬಾರ್, ಯುವ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಶೆಟ್ಟಿ, ಹೆಬ್ರಿ ಸೇರಿದಂತೆ ವಿವಿಧ ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಪ್ರಮುಖರು ಹಾಗೂ ಎನ್‌ಎಸ್‌ಯುಐ ವಿದ್ಯಾರ್ಥಿ ಘಟಕದ ಸದಸ್ಯರು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ರಾಜ್ಯಪಾಲರಿಗೆ ಹೆಬ್ರಿ ಠಾಣಾಧಿಕಾರಿ ಮಹೇಶ್ ಅವರ ಮೂಲಕ ಮನವಿಯನ್ನು ನೀಡಲಾಯಿತು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!