Saturday, October 16, 2021
spot_img
Homeಸ್ಥಳೀಯ ಸುದ್ದಿಸ್ವಚ್ಛತಾ ರಾಯಭಾರಿ 'ಫೆಲಿಕ್ಸ್ ವಾಝ್‌ ಪರಸರ ಕಾಳಜಿ‌ ಎಲ್ಲರಿಗೂ ಮಾದರಿ-ನಿತ್ಯಾನಂದ ಪೈ

ಸ್ವಚ್ಛತಾ ರಾಯಭಾರಿ ‘ಫೆಲಿಕ್ಸ್ ವಾಝ್‌ ಪರಸರ ಕಾಳಜಿ‌ ಎಲ್ಲರಿಗೂ ಮಾದರಿ-ನಿತ್ಯಾನಂದ ಪೈ

ಕಾರ್ಕಳ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕದ ವತಿಯಿಂದ ‘ಹಿರಿಯರೆಡೆಗೆ ನಮ್ಮ ನಡಿಗೆ’ಎಂಬ ವಿಶೇಷ ಕಾರ್ಯಕ್ರಮದಲ್ಲಿ ಕಾರ್ಕಳದ ಸ್ವಚ್ಛತಾ ರಾಯಭಾರಿ ಫೆಲಿಕ್ಸ್‌ ವಾಝ್‌ ಅವರನ್ನು ಉದ್ಯಮಿಗಳಾದ ನಿತ್ಯಾನಂದ ಪೈಯವರು ಸನ್ಮಾನಿಸಿದರು. ಈ ವೇಳೆ ಮಾತನಾಡಿದ ಅವರು ಫೆಲಿಕ್ಸ್‌ ಅವರ ಪರಿಸರ ಕಾಳಜಿ ಮತ್ತು ನಿಸ್ವಾರ್ಥ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಸಾಪ ಕಾರ್ಕಳ ತಾಲೂಕು ಘಟಕದ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಮಿಯ್ಯಾರು ಚರ್ಚಿನ ಪಾಲನಾ ಮಂಡಳಿ ಉಪಾಧ್ಯಕ್ಷ ವಿನೂಪ್ ಡಿಸೋಜಾ, ಪೆರ್ವಾಜೆ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಲಕ್ಷ್ಮೀ ಹೆಗಡೆ, ಫ್ರಾನ್ಸಿಸ್ ಡಿಸೋಜಾ, ಪ್ಲೋರಿನ್ ಡಿಸೋಜಾ, ನ್ಯೂಸ್‌ ಕಾರ್ಕಳ ಸಲಹಾ ಸಮಿತಿಯ ಇಗ್ನೇಷಿಯಸ್ ಫೌಲ್ , ಪ್ರಕಾಶ್ ಫ್ಲಾಯ್ಡ್‌ ಡಿಸೋಜ ಉಪಸ್ಥಿತರಿದ್ದರು. ಪ್ರಾನ್ಸಿಸ್ ಡಿಸೋಜ ಸ್ವಾಗತಿಸಿ, ಎಣ್ಣೆಹೊಳೆ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಶಿವಸುಬ್ರಹ್ಮಣ್ಯ ಭಟ್ ನಿರೂಪಿಸಿದರು. ಅತ್ತೂರಿನ ಸೈಂಟ್ ಲಾರೆನ್ಸ್ ಪ್ರೌಢಶಾಲೆಯ ಅಧ್ಯಾಪಕ ಸುಬ್ರಹ್ಮಣ್ಯ ಉಪಾಧ್ಯಾಯ ವಂದಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!