Wednesday, January 26, 2022
spot_img
HomeUncategorizedಸಾಣೂರು ಗ್ರಾ.ಪಂ. ಗೆ ವಿಶೇಷ ಅನುದಾನ

ಸಾಣೂರು ಗ್ರಾ.ಪಂ. ಗೆ ವಿಶೇಷ ಅನುದಾನ

ಕಾರ್ಕಳ : ಸಾಣೂರು ಗ್ರಾಮ ಪಂಚಾಯತ್ ನಲ್ಲಿ ಆ. 28ರಂದು ಸಚಿವ ಸುನಿಲ್ ಕುಮಾರ್ ಅವರ ಜನ ಸ್ಪಂದನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಸಾಣೂರು ಗ್ರಾಮದ ಅಭಿವೃದ್ದಿಗೆ ವಿಶೇಷ ಅನುದಾನ ನೀಡುವುದಾಗಿ ಭರವಸೆಯಿತ್ತರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತಾ ಶೆಟ್ಟಿ, ಉಪಾಧ್ಯಕ್ಷ ಪ್ರಸಾದ್ ಪೂಜಾರಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗುರುದತ್ ಎಂ.ಎನ್, ಎಪಿಎಂಸಿ ಅಧ್ಯಕ್ಷ ರತ್ನಾಕರ ಅಮೀನ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ದಿವ್ಯಶ್ರೀ ಗಿರೀಶ್ ಅಮೀನ್, ಉದಯ ಎಸ್. ಕೋಟ್ಯಾನ್, ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರವೀಣ್ ಕೋಟ್ಯಾನ್, ಗ್ರಾಮ ಪಂಚಾಯತ್ ಸದಸ್ಯರಾದ ಯುವರಾಜ ಜೈನ್, ವಸಂತ ಎಸ್., ಸತೀಶ್ ಪೂಜಾರಿ, ಯಶೋಧ ಶೆಟ್ಟಿ, ಗಿರಿಜಾ, ಸುಮತಿ, ಪ್ರಮೀಳಾ, ಸರಸ್ವತಿ, ಸುನಂದ ನಾಯ್ಕ್, ರಜನಿ, ಪ್ರಕಾಶ್ ರಾವ್, ಎಪಿಎಂಸಿ ಸದಸ್ಯರಾದ ದೇವಾನಂದ ಶೆಟ್ಟಿ, ಗ್ರಾಮಕರಣಿಕರಾದ ಸಂಗಮೇಶ್, ವಿವಿಧ ಇಲಾಖಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪ್ರಸಾದ್ ಪೂಜಾರಿ ಸ್ವಾಗತಿಸಿ, ಸದಸ್ಯ ಕರುಣಾಕರ ಎಸ್. ಕೋಟ್ಯಾನ್ ಪ್ರಾಸ್ತವಿಕ ಮಾತುಗಳನ್ನಾಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಧು ಎಂ.ಸಿ. ಕಾರ್ಯಕ್ರಮ ನಿರ್ವಹಿಸಿದರು.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!