Sunday, October 2, 2022
spot_img
Homeಜಿಲ್ಲಾಸೆ.1ರಿಂದ ಉಡುಪಿ ಜಿಲ್ಲೆಯಲ್ಲಿ ಶಾಲಾ ಕಾಲೇಜು ಆರಂಭ

ಸೆ.1ರಿಂದ ಉಡುಪಿ ಜಿಲ್ಲೆಯಲ್ಲಿ ಶಾಲಾ ಕಾಲೇಜು ಆರಂಭ

ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಗಣನೀಯವಾಗಿ ಇಳಿಕೆಯಾದ ಹಿನ್ನೆಲೆಯಲ್ಲಿ ಸೆ. 1ರಿಂದ ಉಡುಪಿ ಜಿಲ್ಲೆಯಲ್ಲಿ 9ರಿಂದ 12ನೇ ತರಗತಿಯವರೆಗಿನ ಶಾಲಾ ಕಾಲೇಜುಗಳನ್ನು ತೆರೆಯಲು ಜಿಲ್ಲಾಡಳಿತ ತೀರ್ಮಾನಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಸೆ.1ರಿಂದ 9-12 ತರಗತಿಯವರೆಗೆ ಶಾಲಾ ಕಾಲೇಜು ಪುನರಾರಂಭವಾಗಲಿದ್ದು, ಕೋವಿಡ್ ನಿಯಮಾನುಸಾರ ತರಗತಿ ಆರಂಭವಾಗಲಿದೆ.
ಶಿಕ್ಷಕರಿಗೆ ಕೋವಿಡ್ ಲಸಿಕೆ ಕಡ್ಡಾಯಗೊಳಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಶಿಕ್ಷಕರು ಮಾತ್ರ ಮಕ್ಕಳಿಗೆ ಬೋಧನೆ ಮಾಡಬೇಕು. ಈ ಬಗ್ಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ಎಚ್ಚರವಹಿಸಬೇಕು. ನಿಯಮಾನುಸಾರ ತರಗತಿ ಆರಂಭಿಸಬೇಕು ಎಂದರು.

LEAVE A REPLY

Please enter your comment!
Please enter your name here

Most Popular

error: Content is protected !!