Tuesday, September 28, 2021
spot_img
Homeಸ್ಥಳೀಯ ಸುದ್ದಿಉಡುಪಿ ಜಿಲ್ಲೆಯಾದ್ಯಂತ ವೀಕೆಂಡ್‌ ಕರ್ಫ್ಯೂ ಜಾರಿ

ಉಡುಪಿ ಜಿಲ್ಲೆಯಾದ್ಯಂತ ವೀಕೆಂಡ್‌ ಕರ್ಫ್ಯೂ ಜಾರಿ

ಉಡುಪಿ: ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ. ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಮುಂದಿನ ಆದೇಶದವರೆಗೆ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿರಲಿದ್ದು, ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಿಸಿ ಎಚ್ಚರಿಸಿದ್ದಾರೆ.

ಜಿಲ್ಲೆಯಾದ್ಯಂತ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5ಗಂಟೆಯವರೆಗೆ ಮಾರ್ಗಸೂಚಿಗಳಂತೆ ಕಟ್ಟುನಿಟ್ಟಿನ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ. ಪ್ರತಿ ಶುಕ್ರವಾರ ರಾತ್ರಿ 9.00 ರಿಂದ ಪ್ರತಿ ಸೋಮವಾರ ಬೆಳಿಗ್ಗೆ 5.00 ಗಂಟೆಯವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತವೆ. ಈ ಕೆಳಗಿನ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಚಟುವಟಿಕೆಗಳನ್ನು ಕಂಟೈನ್ಮೆಂಟ್ ವ್ಯಾಪ್ತಿಯ ಹೊರಗಡೆ ಜಿಲ್ಲೆಯಾದ್ಯಂತ ಅನುಮತಿಸಲಾಗಿದೆ.

ಪಬ್‌ ಗಳಿಗೆ ಅನುಮತಿ ಇರುವುದಿಲ್ಲ.
ಕೋವಿಡ್-19 ಸೂಕ್ತ ನಡವಳಿಕೆಯನ್ನು ಹಾಗೂ ಸಂಬಂಧಪಟ್ಟ ಇಲಾಖೆಯವರು ಹೊರಡಿಸುವ ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಅನುಸರಿಸುವ ಷರತ್ತುಗಳೊಂದಿಗೆ ಸ್ಪರ್ಧಾತ್ಮಕ ತರಬೇತಿಗಳಿಗೆ ಮಾತ್ರ ಈಜು ಕೊಳಗಳನ್ನು ತೆರೆಯಲು ಅನುಮತಿಸಿದೆ.

ಕೋವಿಡ್-19 ಸೂಕ್ತ ಶಿಷ್ಟಾಚಾರವನ್ನು ಅನುಸರಿಸುವ ಷರತ್ತುಗಳೊಂದಿಗೆ ಕ್ರೀಡಾಪಟುಗಳ ಅಭ್ಯಾಸಕ್ಕೆ ಮಾತ್ರ ಕ್ರೀಡಾ ಸಂಕೀರ್ಣಗಳನ್ನು/ ಸ್ಟೇಡಿಯಂಗಳನ್ನು ತೆರೆಯಲು ಅನುಮತಿಸಿದೆ. ಆದರೆ ಪ್ರೇಕ್ಷಕರಿಗೆ ಅನುಮತಿ ಇರುವುದಿಲ್ಲ.

ಎಲ್ಲಾ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನಾ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಮತ್ತು ಇತರೆ ಸಭೆಗಳು ಹಾಗೂ ಸಮಾರಂಭಗಳು ಮತ್ತು ಸಾರ್ವಜನಿಕರು ಒಟ್ಟುಗೂಡುವುದನ್ನು ನಿರ್ಬಂಧಿಸಲಾಗಿದೆ.

ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು ಅನುಸರಿಸುವ ಷರತ್ತುಗಳೊಂದಿಗೆ ಮದುವೆ ಸಮಾರಂಭಗಳಿಗೆ ಸರ್ಕಾರದ ಹಿಂದಿನ ಮಾರ್ಗಸೂಚಿಯಂತೆ ಈ ಕೆಳಗೆ ನಿಗದಿಪಡಿಸಿದ ಷರತ್ತಿಗೊಳಪಟ್ಟು ಸಭಾಂಗಣದ ಸಾಮರ್ಥ್ಯದ ಶೇ 50 ರಷ್ಠು ಮತ್ತು ಗರಿಷ್ಠ 400 ಜನರಿಗೆ ಮೀರದಂತೆ ನಡೆಸಲು ಅನುಮತಿಸಲಾಗಿದೆ.

ಮದುವೆ ಸಮಾರಂಭಗಳನ್ನು ಆಯೋಜಿಸುವವರು ಆಮಂತ್ರಣ ಪತ್ರ ಅಥವಾ ಇತರ ಯಾವುದೇ ಸಂಬಂಧಿತ ದಾಖಲೆಗಳೊಂದಿಗೆ ಸಹಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ತಹಶೀಲ್ದಾರ್ ಅವರಿಗೆ ಸಲ್ಲಿಸಬೇಕು.

ಅರ್ಜಿಯ ಸ್ವೀಕೃತಿಯ ಮೇರೆಗೆ, ತಹಶೀಲ್ದಾರರು ಪ್ರತಿ ಮದುವೆ/ ಕೌಟುಂಬಿಕ ಶುಭ ಸಮಾರಂಭ ಕಾರ್ಯಕ್ರಮಕ್ಕೆ 400 ಪಾಸ್‌ಗಳನ್ನು ನೀಡಬೇಕು.
ಪಾಸ್ ಹೊಂದಿರುವ ಜನರಿಗೆ ಮಾತ್ರ ಮದುವೆ/ ಕೌಟುಂಬಿಕ ಶುಭ ಸಮಾರಂಭ ಕಾರ್ಯಕ್ಕೆ ಹಾಜರಾಗಲು ಅವಕಾಶವಿರುತ್ತದೆ ಮತ್ತು ಪಾಸ್ ಅನ್ನು ವರ್ಗಾಯಿಸಲು ಅವಕಾಶವಿರುವುದಿಲ್ಲ.

ಮದುವೆ ಸಮಾರಂಭ ಕಾರ್ಯಕ್ಕೆ ಹಾಜರಾಗುವ ಜನರು ಕೋವಿಡ್‌ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಮತ್ತು ಅವರ ಪಾಸ್‌ಗಳನ್ನು ಅಧಿಕೃತ ಪರಿಶೀಲನಾ ಅಧಿಕಾರಿಗಳಿಗೆ ತೋರಿಸುವುದು.

ಕೋವಿಡ್-19 ಸೂಕ್ತ ನಡವಳಿಕೆಯಂತೆ ಅಂತ್ಯ ಸಂಸ್ಕಾರಕ್ಕೆ 20 ಜನಕ್ಕೆ ಮೀರದಂತೆ ನಡೆಸಲು ಅನುಮತಿಸಲಾಗಿದೆ.
ಪೂಜಾ ಸ್ಥಳಗಳಾದ ದೇವಾಲಯಗಳು, ಮಸೀದಿಗಳು, ಚರ್ಚುಗಳು, ಗುರುದ್ವಾರಗಳು ಮತ್ತು ಇತರ ಧಾರ್ಮಿಕ ಸ್ಥಳಗಳನ್ನು ತೆರೆಯಲು ಅನುಮತಿಸಲಾಗಿದೆ. ಕೋವಿಡ್‌ ಸಮುಚಿತ ವರ್ತನೆಗಳನ್ನು ಪಾಲಿಸುವುದರೊಂದಿಗೆ ಮತ್ತು ಸಂಬಂಧಪಟ್ಟ ಇಲಾಖೆಯಿಂದ ಹೊರಡಿಸಲಾದ ಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೆ ಒಳಪಟ್ಟು ಪೂಜಾ ಸ್ಥಳಗಳಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ನಡೆಸಲು ಅನುಮತಿಸಿದೆ. ಆದರೆ ಸದರಿ ಧಾರ್ಮಿಕ ಸ್ಥಳಗಳಲ್ಲಿ ಜಾತ್ರೆಗಳು, ದೇವಾಲಯ ಉತ್ಸವಗಳು/ಹಬ್ಬಗಳು ,ಮೆರವಣಿಗೆಗಳು ಮತ್ತು ಒಟ್ಟುಗೂಡುವುದನ್ನು ನಿರ್ಬಂಧಿಸಲಾಗಿದೆ.

ಕೋವಿಡ್-19 ಸೂಕ್ತ ನಡವಳಿಕೆಯಂತೆ ಶೇ. 100 ರಷ್ಟು ಆಸನ ಸಾಮರ್ಥ್ಯದವರೆಗೆ ಸಾರ್ವಜನಿಕ ಸಾರಿಗೆಗಳಿಗೆ ಅನುಮತಿಸಲಾಗಿದೆ. ಎಲ್ಲಾ ಅಂಗಡಿಗಳು, ರೆಸ್ಟೋರೆಂಟ್ ಗಳು, ಮಾಲ್ ಗಳು, ಖಾಸಗಿ ಕಚೇರಿಗಳು ಮತ್ತು ಮುಚ್ಚಿದ ಸ್ಥಳಗಳಲ್ಲಿ, ಕೋವಿಡ್-19 ಸೂಕ್ತ ನಡವಳಿಕೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ತಪ್ಪಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರನ್ವಯ ಕ್ರಮ ಕೈಕೊಳ್ಳಲಾಗುವುದು.

ಸಿನೆಮಾ ಹಾಲ್‌ಗಳು / ಮಲ್ಟಿಪ್ಲೆಕ್ಸ್‌ಗಳು / ಚಿತ್ರಮಂದಿರಗಳು / ರಂಗಮಂದಿರಗಳು / ಸಭಾಂಗಣಗಳು ಮತ್ತು ಅಂತಹದೇ ರೀತಿಯ ಸ್ಥಳಗಳಲ್ಲಿ ಶೇ. 50 ರಷ್ಟು ಆಸನ ಸಾಮರ್ಥ್ಯದೊಂದಿಗೆ ಕೋವಿಡ್ ಸೂಕ್ತ ನಡವಳಿಕೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತುಗಳೊಂದಿಗೆ ಕಾರ್ಯನಿರ್ವಹಿಸಲು ಅನುಮತಿಯನ್ನು ನೀಡಲಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!