Wednesday, January 26, 2022
spot_img
Homeಸ್ಥಳೀಯ ಸುದ್ದಿವಿದ್ಯುತ್ ಬಿಲ್ ನಲ್ಲಿ ಅಕ್ರಮವೆಸಗಿದ ಮೂವರು ಸಿಬ್ಬಂದಿ ಅಮಾನತು- ಸುನಿಲ್ ಕುಮಾರ್

ವಿದ್ಯುತ್ ಬಿಲ್ ನಲ್ಲಿ ಅಕ್ರಮವೆಸಗಿದ ಮೂವರು ಸಿಬ್ಬಂದಿ ಅಮಾನತು- ಸುನಿಲ್ ಕುಮಾರ್

ಭ್ರಷ್ಟಾಚಾರಿಗೆ ಕಠಿಣ ಸಂದೇಶ ರವಾನಿಸಿದ ಸಚಿವರು

ಕಾರ್ಕಳ : ವಿದ್ಯುತ್ ಬಿಲ್ ನಲ್ಲಿ ತಿದ್ದುಪಡಿ ಮಾಡಿ ಬೆಸ್ಕಾಂಗೆ ನಷ್ಟವುಂಟು ಮಾಡಿರುವ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ಮುಳಬಾಗಿಲು ಉಪವಿಭಾಗದ ಕಿರಿಯ ಸಹಾಯಕ ಮೆಹಬೂಬ್ ಪಾಷ, ಕಿರಿಯ ಸಹಾಯಕಿ ಗಾಯತ್ರಮ್ಮ ಹಾಗೂ ಕಿರಿಯ ಸಹಾಯಕಿ ಸುಜಾತಮ್ಮ ಅವರು ಅಮಾನತುಗೊಳಗಾದ ಸಿಬ್ಬಂದಿ.

ಮಾಹೆ ಗ್ರಾಹಕರಿಗೆ ವಿದ್ಯುತ್ ಬಿಲ್‌ ವಿತರಿಸುವ ವೇಳೆಯಲ್ಲಿ ಕೆಲವು ಬಿಲ್ಲುಗಳನ್ನು ಮಾರ್ಪಾಟು ಮಾಡಿರುತ್ತಾರೆ. ಆ ಮೂಲಕ ಬೆಸ್ಕಾಂಗೆ ಬರಬೇಕಾದ ವಾಸ್ತವಿಕ ಆದಾಯದಲ್ಲಿ ನಷ್ಟ ಉಂಟಾಗಲು ಕಾರಣರಾಗಿದ್ದಾರೆ, ಈ ಹಿನ್ನೆಲೆಯಲ್ಲಿ ಇವರ ಮೇಲೆ ಕೋಲಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಿಸಲಾಗಿದೆ ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.

ತಾವು ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ಅಕ್ರಮವೆಸಗಿ ಆ ಮೂಲಕ ಇಲಾಖೆಗೆ ನಷ್ಟವುಂಟು ಮಾಡುವ ಯಾವುದೇ ಅಧಿಕಾರಿ, ಸಿಬ್ಬಂದಿ ಇರಲಿ ಅವರ ಮೇಲೆ ಮುಲಾಜಿಲ್ಲದೆ ಕ್ರಮ ವಹಿಸಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ ನೀಡಿದರು.

ಮೂವರು ಸಿಬ್ಬಂದಿ ಬೇರೆ, ಬೇರೆ ಐಪಿ ವಿಳಾಸಗಳ ಗಣಕಯಂತ್ರಗಳಲ್ಲಿ ಐಡಿ ಗಳನ್ನು ಉಪಯೋಗಿಸಿ ವಂಚನೆ ಎಸಗಿರುವುದು ದೃಢವಾಗಿರುವುದರಿಂದ ಹಾಗೂ 8 ಆರ್ ಆರ್ ಸಂಖ್ಯೆಗಳಲ್ಲಿ ಒಟ್ಟು 444966-00 ಗಳಷ್ಟು ಮೊತ್ತ ಕಂಪನಿಗೆ ನಷ್ಟವಾಗಿರುವುದರಿಂದ ಇವರ ಮೇಲೆ ಇಲಾಖಾ ವಿಚಾರಣೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ,

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!