Wednesday, January 26, 2022
spot_img
HomeUncategorizedಕಾರ್ಕಳದಲ್ಲಿ ಮೊದಲ ಹಂತವಾಗಿ 6 ಕೋಟಿ ರೂ. ವೆಚ್ಚದಲ್ಲಿ 133 ಟಿಸಿ ಸ್ಥಾಪನೆ- ಸಚಿವ ಸುನಿಲ್‌...

ಕಾರ್ಕಳದಲ್ಲಿ ಮೊದಲ ಹಂತವಾಗಿ 6 ಕೋಟಿ ರೂ. ವೆಚ್ಚದಲ್ಲಿ 133 ಟಿಸಿ ಸ್ಥಾಪನೆ- ಸಚಿವ ಸುನಿಲ್‌ ಕುಮಾರ್‌

ಕಾರ್ಕಳ : ಕಾರ್ಕಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 6 ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ 133 ವಿದ್ಯುತ್‌ ಪರವರ್ತಕ ಸ್ಥಾಪಿಸಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ಹೇಳಿದರು.

ಮಾದರಿ ಗ್ರಾಮ ಆಯ್ಕೆ
ಅವರು ಸೆ. 9ರಂದು ಸಾಣೂರಿನಲ್ಲಿ ಮಾದರಿ ಗ್ರಾಮ ಯೋಜನೆಯಡಿ 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ಟಿಸಿ ಉದ್ಘಾಟಿಸಿ ಮಾತನಾಡಿದರು.
ಇಂಧನ ಇಲಾಖೆಯಿಂದ ಮಾದರಿ ಗ್ರಾಮಗಳನ್ನು ಆಯ್ಕೆ ಮಾಡಿ ಆ ಗ್ರಾಮದಲ್ಲಿ ಬರುವಂತಹ ವಿದ್ಯುತ್ತಿನ ಸಮಸ್ಯೆಗಳು ಮತ್ತು ಮೇಲ್ದರ್ಜೆಗೆ ಏರಿಸುವ ಕಾಮಗಾರಿಗಳೆಲ್ಲವನ್ನು ಮುಗಿಸುವಂತಹ ಜವಾಬ್ದಾರಿ ನನ್ನ ಮೇಲಿದೆ. ಆ ನಿಟ್ಟಿನಲ್ಲಿ ಬಹಳ ದೊಡ್ಡ ಪ್ರಮಾಣದ ಬದಲಾವಣೆಗಳು ಪ್ರತಿ ಗ್ರಾಮದಲ್ಲಿ ಆಗಬೇಕಿದೆ ಎಂದವರು ಹೇಳಿದರು.
ಮೊದಲೆಲ್ಲಾ ಪವರ್ ಕಟ್, ಲೋ ವೋಲ್ಟೇಜ್ ಸಮಸ್ಯೆ ಬಹಳಷ್ಟು ಪ್ರಮಾಣದಲ್ಲಿತ್ತು. ಈಗ ಬಹಳಷ್ಟು ಸುಧಾರಣೆಯಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಇಲಾಖೆಯ ವ್ಯವಸ್ಥೆಗಳನ್ನು ಸುಧಾರಿಸಬೇಕು ಎನ್ನುವ ಹಿನ್ನೆಲೆಯಲ್ಲಿ ಕಾರ್ಕಳ ತಾಲೂಕಿನಲ್ಲಿ 133 ಹೊಸ ಟಿ.ಸಿ. ಅಳವಡಿಕೆಗೆ ಆದೇಶ ಹೊರಡಿಸಲಾಗಿದ್ದು, ಮುಂದಿನ ಮೂರು ತಿಂಗಳೊಳಗೆ ತಾಲೂಕಿನ ವಿದ್ಯುತ್‌ ಸಮಸ್ಯೆ ಬಗೆಹರಿಯಲಿದೆ ಎಂದರು.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!