ಐದು ರೂಪಾಯಿ ನಾಣ್ಯ ನುಂಗಿ ಮಗು ಸಾವು

ಮೈಸೂರು: ಆಟವಾಡುತ್ತಿದ್ದ ನಾಲ್ಕು ವರ್ಷದ ಮಗು ಐದು ರೂಪಾಯಿ ನಾಣ್ಯ ನುಂಗಿದ ಪರಿಣಾಮ ಮೃತಪಟ್ಟಿದೆ. ಮೈಸೂರಿನ ಹುಣಸೂರು ತಾಲೂಕಿನ ಆಯರಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ.
ಮೃತಪಟ್ಟ ಮಗುವನ್ನು ನಾಲ್ಕು ವರ್ಷದ ಖುಷಿ ಎಂದು ಗುರುತಿಸಲಾಗಿದೆ. ಶುಕ್ರವಾರ ನಾಣ್ಯದೊಂದಿಗೆ ಆಟವಾಡುತ್ತಿದ್ದ ಮಗು ಆಕಸ್ಮಿಕವಾಗಿ ನಾಣ್ಯವನ್ನು ನುಂಗಿದೆ. ತಕ್ಷಣ ಮಗುವನ್ನು ಮೊದಲು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ.





























































































































































































































error: Content is protected !!
Scroll to Top