Wednesday, January 26, 2022
spot_img
Homeಸ್ಥಳೀಯ ಸುದ್ದಿಸಾಣೂರು : ಅಭಿನಂದನಾ ಕಾರ್ಯಕ್ರಮ

ಸಾಣೂರು : ಅಭಿನಂದನಾ ಕಾರ್ಯಕ್ರಮ

ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಸಂಘ-ಸಂಸ್ಥೆಗಳ ಪಾತ್ರ ಮಹತ್ತರವಾದುದು- ಬಿಇಒ ವೆಂಕಟೇಶ್‌ ನಾಯಕ್‌

ಅಂಕ ಗಳಿಕೆಯೊಂದಿಗೆ ಸದ್ಗುಣ ಮೈಗೂಡಿಸಿಕೊಳ್ಳಬೇಕು- ಹರ್ಷಿಣಿ

ಕಾರ್ಕಳ : ನೆಹರು ಯುವ ಕೇಂದ್ರ ಹಾಗೂ ಸಾಣೂರು ಯುವಕ ಮಂಡಲ ಸಂಯುಕ್ತ ಆಶ್ರಯದಲ್ಲಿ ಎಸ್ಎಸ್ಎಲ್‌ಸಿ ಅಂತಿಮ ಪರೀಕ್ಷೆಯಲ್ಲಿ ಶೇ. 90ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಪಟೇಲ್ ಮುದ್ದಣ್ಣ ಶೆಟ್ಟಿ ಸ್ಮಾರಕ ಜ್ಯೋತಿ ಕಲಾ ಮಂಟಪದಲ್ಲಿ ಸೆ. 5ರಂದು ನಡೆಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ಜಿ. ನಾಯಕ್ ಮಾತನಾಡಿ, ವಿದ್ಯಾರ್ಥಿಗಳೇ ನಮ್ಮ ಆಸ್ತಿ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರದಂತೆಯೇ ಸಂಘ ಸಂಸ್ಥೆಗಳ ಪ್ರೋತ್ಸಾಹವೂ ಮಹತ್ತರವಾದುದು ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಇಲ್ಲಿನ ಮುಖ್ಯಶಿಕ್ಷಕಿ ಹರ್ಷಿಣಿ, ವಿದ್ಯಾರ್ಥಿಗಳು ಅಂಕ ಗಳಿಕೆಯೊಂದಿಗೆ ವಿನಯತೆ, ಸಂಸ್ಕಾರ, ಒಳ್ಳೆಯ ಗುಣನಡತೆ ಮೈಗೂಡಿಸಿಕೊಳ್ಳಬೇಕು. ಇಂತಹ ಗುಣಗಳಿದ್ದಲ್ಲಿ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ. ಸಾಣೂರು ಯುವಕ ಮಂಡಲ ಪ್ರತಿಭಾವಂತರನ್ನು ಗುರುತಿಸುವ ಕಾರ್ಯ ಮಾಡುತ್ತಿರುವುದು ಅಭಿನಂದನೀಯ ಎಂದರು.
ಸಾಣೂರು ಪ್ರೌಢಶಾಲೆ ಮುಖ್ಯಶಿಕ್ಷಕ ಗಿರೀಶ್ ಕುಮಾರ್, ಬೆಳ್ಮಣ್‌ ಲಕ್ಷ್ಮಿ ಜನಾರ್ಧನ್ ಪದವಿ ಪೂರ್ವ ಕಾಲೇಜು ಉಪಪ್ರಾಂಶುಪಾಲ ಸಂದೀಪ್ ಪುತ್ರನ್ ಮಾತನಾಡಿದರು. ಎಸ್. ಎಸ್. ಎಲ್. ಸಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ಮಯೂರಿ ಜೆ. ಶೆಟ್ಟಿ ಸೇರಿದಂತೆ ಶೇಕಡಾ 90 % ಕ್ಕಿಂತ ಅಧಿಕ ಅಂಕ ಪಡೆದ 8 ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಶಿಕ್ಷಕರ ದಿನಾಚರಣೆಯಂಗವಾಗಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಅರ್ಪಿಸಲಾಯಿತು. ಸಾಣೂರು ಗ್ರಾಮದ ಐವರು ನಿವೃತ್ತ ಶಿಕ್ಷಕರನ್ನು ಅಭಿನಂದಿಸಲಾಯಿತು. ನಿವೃತ ಶಿಕ್ಷಕರ ಪರವಾಗಿ ಬಿ. ಪುರುಷೋತ್ತಮ ಗೌಡ ಮಾತನಾಡಿದರು. ವಿದ್ಯಾರ್ಥಿಗಳ ಪೋಷಕರ ಪರವಾಗಿ ಸಾಣೂರು ನರಸಿಂಹ ಕಾಮತ್ ಅಭಿಪ್ರಾಯ ವ್ಯಕ್ತಪಡಿಸಿದರು.
ಶ್ಯಾಮ ಶೆಟ್ಟಿ ಸಾಣೂರು, ಪ್ರಭಾತ್ ನಾಯ್ಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯುವಕ ಮಂಡಲದ ಅಧ್ಯಕ್ಷ ಪ್ರಸಾದ್ ಪೂಜಾರಿ ಸ್ವಾಗತಿಸಿದರು. ಕಾರ್ಯದರ್ಶಿ ಮೋಹನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಸತೀಶ್ ಮಡಿವಾಳ ವಂದಿಸಿದರು. ಯುವಕ ಮಂಡಲದ ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ, ಜೊತೆ ಕಾರ್ಯದರ್ಶಿ ಪ್ರಕಾಶ್ ರಾವ್ ಸಹಕರಿಸಿದರು.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!