Thursday, December 2, 2021
spot_img
Homeಸ್ಥಳೀಯ ಸುದ್ದಿಎಲ್ಲ ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ರದ್ದು

ಎಲ್ಲ ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ರದ್ದು

ಬೆಂಗಳೂರು: ರಾಜ್ಯದ ಗಡಿ ಜಿಲ್ಲೆಗಳಲ್ಲಿದ್ದ ವೀಕೆಂಡ್‌ ಕರ್ಫ್ಯೂವನ್ನ ರದ್ದುಗೊಳಿಸಿ ರಾಜ್ಯ ಸರಕಾರ ಮಹತ್ವದ ಆದೇಶ ಹೊರಡಿಸಿದೆ. ಗಡಿ ಜಿಲ್ಲೆಗಳಲ್ಲಿ ಪಾಸಿಟಿವ್‌ ದರ ಶೇ. 2ಕ್ಕಿಂತ ಕಡಿಮೆಯಿದ್ದ ಹಿನ್ನಲೆಯಲ್ಲಿ ವಾರಾಂತ್ಯ ಕರ್ಫ್ಯೂ ರದ್ದು ಪಡಿಸಿದೆ.
ದ.ಕ., ಚಾಮರಾಜನಗರ, ಕೊಡಗು ಸೇರಿದಂತೆ ಹಲವು ಗಡಿ ಜಿಲ್ಲೆಗಳಲ್ಲಿದ್ದ ವೀಕೆಂಡ್‌ ಕರ್ಫ್ಯೂ ರದ್ದುಗೊಳಿಸಲಾಗಿದೆ. ವಾರಾಂತ್ಯ ಕರ್ಫ್ಯೂ ರದ್ದುಗೊಳಿಸುವಂತೆ ಗಡಿ ಜಿಲ್ಲೆಗಳಲ್ಲಿ ಶಾಸಕರು, ಸಚಿವರು ಸರಕಾರವನ್ನು ಒತ್ತಾಯಿಸಿದ್ದರು.
ಅದಾಗ್ಯೂ ಆಯಾ ಜಿಲ್ಲಾಧಿಕಾರಿಗಳು ಅಲ್ಲಿನ ಪರಿಸ್ಥಿತಿ ನೋಡಿಕೊಂಡು ಕರ್ಫ್ಯೂ ರದ್ದುಗೊಳಿಸುವ ಸಂಬಂಧ ತೀರ್ಮಾನ ಕೈಗೊಳ್ಳಬಹುದು.
ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾವಹಿಸಲು ಸರಕಾರ ಆಯಾ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.
ರಾಜ್ಯದಲ್ಲಿ ಪಾಸಿಟಿವಿಟಿ ರೇಟ್‌ ಇಳಿಮುಖ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಪಾಸಿಟಿವಿಟಿ ರೇಟ್‌ ಇಳಿಮುಖ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದ ಸರಾಸರಿ ಪಾಸಿಟಿವಿಟಿ ರೇಟ್‌ ಶೇ. 0.73ರಷ್ಟಿದೆ. ವೀಕೆಂಡ್‌ ಕರ್ಫ್ಯೂ ಹೇರಿಕೆ ಮಾಡಲಾಗಿದ್ದ ಜಿಲ್ಲೆಗಳಲ್ಲಿ ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್‌ ಇತ್ತು. ಇದೀಗ ಕಡಿಮೆಯಾಗಿದೆ. ಈ ಹಿನ್ನಲೆ ವೀಕೆಂಡ್‌ ಕರ್ಫ್ಯೂ ಆದೇಶ ರದ್ದು ಮಾಡಲಾಗಿದೆ.
ಸೋಕು ಹೆಚ್ಚಳ ಆದರೆ ವೀಕೆಂಡ್‌ ಕರ್ಫ್ಯೂ ಜಾರಿಗೆ ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!