Thursday, December 2, 2021
spot_img
Homeಸ್ಥಳೀಯ ಸುದ್ದಿವಿದ್ಯುತ್ ಚಾಲಿತ ವಾಹನಗಳಿಗೆ ಹೆಚ್ಚಿನ ಪ್ರೋತ್ಸಾಹ : ಸಚಿವ ಸುನಿಲ್ ಕುಮಾರ್

ವಿದ್ಯುತ್ ಚಾಲಿತ ವಾಹನಗಳಿಗೆ ಹೆಚ್ಚಿನ ಪ್ರೋತ್ಸಾಹ : ಸಚಿವ ಸುನಿಲ್ ಕುಮಾರ್

ಬೆಂಗಳೂರು: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ, ವಿಶ್ವ ವಿದ್ಯುತ್ ಚಾಲಿತ ವಾಹನ ದಿನಾಚರಣೆ-2021 ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಇ-ವಾಹನಗಳ ರ‍್ಯಾಲಿಯ
ಕಾರ್ಯಕ್ರಮದಲ್ಲಿ ಇಂಧನ ಸಚಿವ ಸುನೀಲ್‌ ಕುಮಾರ್‌, ಸಚಿವ ನಾರಾಯಣಗೌಡ ಹಾಗೂ ತೋಟಗಾರಿಕಾ ಸಚಿವ ಮುನಿರತ್ನಂ ಅವರ ಜತೆಗೂಡಿ ಇ-ವಾಹನವನ್ನು ಚಲಾಯಿಸಿದರು.
ಇದಕ್ಕೂ ಮುನ್ನ ಸಚಿವರು, ಪರಿಸರ ಸ್ನೇಹಿ ವಾಹನ ಬಳಸಿ ಎನ್ನುವ ನಾಮಫಲಕಗಳನ್ನು ಅನಾವರಣಗೊಳಿಸಿದರು. ಈ ವೇಳೆ ಮಾತನಾಡಿದ ಇಂಧನ ಸಚಿವ ಸುನಿಲ್ ಕುಮಾರ್, ವಿದ್ಯುತ್ ಚಾಲಿತ ವಾಹನಗಳು ಭವಿಷ್ಯಕ್ಕೆ ಅನಿವಾರ್ಯವಾಗಬೇಕು. ಕೇಂದ್ರ ಹಾಗೂ ರಾಜ್ಯ ವಿದ್ಯುತ್ ಚಾಲಿತ ವಾಹನಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತದೆ. ಸದ್ಯ 136 ಕಡೆ ವಿದ್ಯುತ್ ವಾಹನ ರೀಚಾರ್ಜಿಂಗ್ ಸೆಂಟರ್ ಸ್ಥಾಪಿಸಿದ್ದೇವೆ. ಮುಂದಿನ ದಿನಗಳಲ್ಲಿ 500 ಕ್ಕೂ ಹೆಚ್ಚು ಚಾರ್ಜಿಂಗ್ ಸೆಂಟರ್ ಮಾಡುವ ಯೋಜನೆಯಿದೆ’ ಎಂದರು.
ಇದೇ ವೇಳೆ ಮಾತನಾಡಿದ ತೋಟಗಾರಿಕೆ ಸಚಿವ ಮುನಿರತ್ನಂ, ರಿಚಾರ್ಜ್ ಪಾಯಿಂಟ್ ಗಳನ್ನು ಪೆಟ್ರೋಲ್ ಬಂಕ್ ಬಳಿಯೇ ಸ್ಥಾಪಿಸಬೇಕು ಎಂದು ಇಂಧನ ಸಚಿವರಿಗೆ ಮನವಿ ಮಾಡಿದರು. ಇದರಿಂದ 40% ಪೆಟ್ರೋಲ್ ಬಳಕೆ ಕಡಿಮೆ ಮಾಡಬಹುದು ಎಂದು ಅಭಿಪ್ರಾಯ ಪಟ್ಟರು. ಇ-ವಾಹನಗಳ ದರ ಪೆಟ್ರೋಲ್ ಚಾಲಿತ ವಾಹನಗಳಿಗಿಂತ ಕಡಿಮೆ ಮಾಡಬೇಕು. ವಾಹನ ಕಂಪನಿಗಳಿಗೆ ಬೆಲೆ ಕಡಿಮೆ ಮಾಡಬೇಕು ಎಂದು ಮನವಿ ಮಾಡಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!