Tuesday, September 28, 2021
spot_img
Homeಸ್ಥಳೀಯ ಸುದ್ದಿವಿಧಾನ ಪರಿಷತ್ ಸಭಾನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ

ವಿಧಾನ ಪರಿಷತ್ ಸಭಾನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ಸಮಾಜ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ವಿಧಾನ ಪರಿಷತ್‌ ಸಭಾ ನಾಯಕರಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ನಾಮನಿರ್ದೇಶನ ಬಗ್ಗೆ ಸಭಾಪತಿಗೆ ಅಧಿಕೃತ ಮಾಹಿತಿ ನೀಡಿದ್ದು, ಕೋಟ ಶ್ರೀನಿವಾಸ ಪೂಜಾರಿ ಅವರು ಸತತ 3 ಬಾರಿ ದ.ಕ. ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಅವರು ಆಯ್ಕೆಯಾಗಿದ್ದಾರೆ. ಈ ಹಿಂದೆ ಪ್ರತಿಪಕ್ಷ ನಾಯಕರಾಗಿ ಕಾರ್ಯನಿರ್ವಹಿಸಿದ್ದರು. ಶ್ರೇಷ್ಠ ವಾಗ್ಮಿಯಾಗಿ ಗುರುತಿಸಿಕೊಂಡಿರುವ ಅವರು ಅತ್ಯಂತ ಸಮರ್ಥವಾಗಿ ಸದನವನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿದವರಾಗಿದ್ದಾರೆ. ಕೋಟ ಶ್ರೀನಿವಾಸ್‌ ಅವರ ಮಾತುಗಾರಿಕೆ ಈ ಹಿಂದೆ ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರನ್ನು ಚಕಿತಗೊಳಿಸಿತ್ತು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!