Wednesday, January 26, 2022
spot_img
Homeಸ್ಥಳೀಯ ಸುದ್ದಿಮೈಟೆಕ್‌ ತಾಂತ್ರಿಕ ಶಿಕ್ಷಣ ಸಂಸ್ಥೆ ವಾರ್ಷಿಕ ಕ್ರೀಡಾಕೂಟ

ಮೈಟೆಕ್‌ ತಾಂತ್ರಿಕ ಶಿಕ್ಷಣ ಸಂಸ್ಥೆ ವಾರ್ಷಿಕ ಕ್ರೀಡಾಕೂಟ

ತಾಲೂಕು ಕ್ರೀಡಾಂಗಣದಲ್ಲಿ ಕ್ರೀಡೆಗೆ ಪೂರಕ ವಾತಾವರಣ : ರಿತೇಶ್‌ ಶೆಟ್ಟಿ

ಕಾರ್ಕಳ : ಕಾರ್ಕಳ ತಾಲೂಕು ಕ್ರೀಡಾಂಗಣದಲ್ಲಿ ಕ್ರೀಡೆಗೆ ಪೂರಕ ವಾತಾವರಣ ಕಲ್ಪಿಸಲಾಗಿದೆ. ಕೊರೊನಾ ಕಾರಣದಿಂದಾಗಿ ಸ್ಥಗಿತಗೊಂಡ ಕ್ರೀಡಾಕೂಟಕ್ಕೆ ಮೈಟೆಕ್‌ ತಾಂತ್ರಿಕ ಶಿಕ್ಷಣ ಸಂಸ್ಥೆ ಚಾಲನೆ ನೀಡಿರುವುದು ಸಂತಸ ತಂದಿದೆ ಎಂದು ತಾಲೂಕು ಯುವ ಸಬಲೀಕರಣ ಹಾಗೂ ಕ್ರೀಡಾಧಿಕಾರಿ ರಿತೇಶ್‌ ಶೆಟ್ಟಿ ಹೇಳಿದರು.

ಅವರು ಸೆ. 11ರಂದು ಕಾರ್ಕಳ ತಾಲೂಕು ಕ್ರೀಡಾಂಗಣದಲ್ಲಿ ಮೈಟೆಕ್‌ ತಾಂತ್ರಿಕ ಶಿಕ್ಷಣ ಸಂಸ್ಥೆ ವತಿಯಿಂದ ವಿದ್ಯಾರ್ಥಿಗಳಿಗೆ ನಡೆದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಕಾರ್ಕಳ ಕ್ರೀಡಾಂಗಣ 50 ಲಕ್ಷ ರೂ. ವೆಚ್ಚದಲ್ಲಿ ನವೀಕರಣಗೊಂಡಿದೆ. 3.5 ಕೋಟಿ ರೂ. ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣವಾಗುತ್ತಿದೆ. 15 ಲಕ್ಷ ರೂ. ವೆಚ್ಚದಲ್ಲಿ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಈಜು ಕೋಳ ಸಾರ್ವಜನಿಕ ಮುಕ್ತಗೊಳಿಸಲಾಗಿದೆ ಎಂದು ರಿತೇಶ್‌ ಶೆಟ್ಟಿ ಹೇಳಿದರು.

ನ್ಯೂಸ್‌ ಕಾರ್ಕಳ ಸಂಪಾದಕ ರಾಮಚಂದ್ರ ಬರೆಪ್ಪಾಡಿ ಮಾತನಾಡಿ, ಕ್ರೀಡೆ ಕೇವಲ ಆಟವಲ್ಲ. ಜೀವನ ಪಾಠವೂ ಹೌದು. ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಕ್ರೀಡಾಸ್ಪೂರ್ತಿ, ಕ್ರೀಡಾಮನೋಭಾವದಿಂದ ಆಡುವುದು ಮುಖ್ಯ. ಸೋತಾಗ ಕುಗ್ಗದೇ, ಗೆದ್ದಾಗ ಹಿಗ್ಗದೇ ಸಮಚಿತ್ತದಿಂದ ಅದನ್ನು ಸ್ವೀಕರಿಬೇಕೆಂದು ಹೇಳಿ, ಕ್ರೀಡಾಕೂಟಕ್ಕೆ ಶುಭಹಾರೈಸಿದರು.

ಸಂಸ್ಥೆಯ ಪ್ರಾಂಶುಪಾಲ ಉದಯ ಆಚಾರ್ಯ, ಸ್ಮರಣ್‌ ಕುಮಾರ್‌ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಶ್ವಿನಿ ಸ್ವಾಗತಿಸಿ, ಲಾವಣ್ಯ ನಿರೂಪಿಸಿ, ಧನರಾಜ್‌ ವಂದಿಸಿದರು.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!