Sunday, September 26, 2021
spot_img
Homeರಾಜ್ಯಅಕ್ಟೋಬರ್-ನವೆಂಬರ್ ನಲ್ಲಿ ಕೋವಿಡ್ ಮೂರನೇ  ಅಲೆ: ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ

ಅಕ್ಟೋಬರ್-ನವೆಂಬರ್ ನಲ್ಲಿ ಕೋವಿಡ್ ಮೂರನೇ  ಅಲೆ: ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್ ವೇಳೆಗೆ ಮೂರನೇ ಅಲೆ ಎದುರಾಗಬಹುದು ಎಂದು ಕೋವಿಡ್-19 ತಡೆಗೆ ಕ್ರಮ ಕೈಗೊಳ್ಳಲು ರಚಿಸಲಾಗಿರುವ ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ನೀಡಿದೆ.

ಹಬ್ಬಗಳ ಸಾಲುಗಳು ಈ ತಿಂಗಳಲ್ಲಿ ಬರುವುದರಿಂದ ಇತ್ತೀಚೆಗೆ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಠಿಣವಾಗಿ ಜಾರಿಗೊಳಿಸಿ ಪಾಲಿಸಬೇಕೆಂದು ಟಿಎಸಿ ಹೇಳಿದೆ.

ಒಂದು ವೇಳೆ ಮಾರ್ಗಸೂಚಿಗಳನ್ನು ಪಾಲಿಸದೇ ಇದ್ದಲ್ಲಿ ಅವ್ಯವಸ್ಥೆ ಉಂಟಾಗಲಿದೆ. ಈ ಹಂತದಲ್ಲಿ ಮಾರ್ಗಸೂಚಿಗಳನ್ನು ಪಾಲಿಸುವುದು ಬಹಳ ಮುಖ್ಯ. ರಾಜ್ಯದಲ್ಲಿ ಈಗ ಕೋವಿಡ್-19 ಸೋಂಕು ಪ್ರಸರಣ ಸಂಖ್ಯೆ ಇಳಿಮುಖವಾಗಿದೆ. ಆದರೆ  ರಾಜಕೀಯ ರ್ಯಾಲಿಗಳು, ಹಬ್ಬದ ಸಂಭ್ರಮದಲ್ಲಿ ಮೈಮರೆತು ನಿರ್ಲಕ್ಷ್ಯ ವಹಿಸಿದರೆ, ಮೂರನೇ ಅಲೆಯ ಪರಿಣಾಮ ತೀವ್ರವಾಗಿರಲಿದೆ ಎಂದು ಸಮಿತಿಯಲ್ಲಿರುವ ತಜ್ಞರೊಬ್ಬರು ಎಚ್ಚರಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!