Saturday, September 25, 2021
spot_img
Homeರಾಜ್ಯಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ನಿಧನ

ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ನಿಧನ

ಮಂಗಳೂರು: ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.13 ರಂದು ನಿಧನರಾಗಿದ್ದಾರೆ. 

ಮನೆಯಲ್ಲಿ ವ್ಯಾಯಾಮ ಮಾಡುತ್ತಿರುವಾಗ ಕುಸಿದು ಬಿದ್ದು ತೀವ್ರವಾದ ಆಂತರಿಕ ಗಾಯಗಳಾಗಿದ್ದ ಪರಿಣಾಮ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. 

ಮಾ.27, 1941 ರಲ್ಲಿ ಜನಿಸಿದ್ದ ಆಸ್ಕರ್ ಫರ್ನಾಂಡಿಸ್, ಐಎನ್ ಸಿಯಲ್ಲಿ ಉನ್ನತ ಹುದ್ದೆಗಳನ್ನು ನಿಭಾಯಿಸಿ ಅನುಭವವುಳ್ಳ ನಾಯಕರಾಗಿದ್ದರು. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ರಾಜಕೀಯ ಕಾರ್ಯದರ್ಶಿಯಾಗಿದ್ದಷ್ಟೇ ಅಲ್ಲದೇ ರಾಹುಲ್ ಗಾಂಧಿ ಅವರಿಗೂ ಆಸ್ಕರ್ ಆಪ್ತರಾಗಿದ್ದರು.

ಡಾ.ಮನಮೋಹನ್ ಸಿಂಗ್ ಅವರ ಯುಪಿಎ ಮೊದಲ ಸರ್ಕಾರದಲ್ಲಿ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದ ರಾಜ್ಯ ಖಾತೆ ಸಚಿವರಾಗಿದ್ದ ಆಸ್ಕರ್ ಫರ್ನಾಂಡಿಸ್ ಯುಪಿಎ-2 ನಲ್ಲಿ ಸಾರಿಗೆ, ರಸ್ತೆ ಹಾಗೂ ಹೆದ್ದಾರಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!