Sunday, October 2, 2022
spot_img
Homeಸ್ಥಳೀಯ ಸುದ್ದಿಆಸ್ಕರ್‌ ನಿಧನಕ್ಕೆ ಕೇಂದ್ರ ಸಚಿವೆ ಶೋಭಾ ಸಂತಾಪ

ಆಸ್ಕರ್‌ ನಿಧನಕ್ಕೆ ಕೇಂದ್ರ ಸಚಿವೆ ಶೋಭಾ ಸಂತಾಪ

ಆಸ್ಕರ್‌ ಸರಳ-ಸಜ್ಜನ ನಾಯಕ

ಉಡುಪಿ : ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರ ನಿಧನಕ್ಕೆ ಉಡುಪಿ-ಚಿಕ್ಕಮಗಳೂರು ಸಂಸದೆ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಕು. ಶೋಭಾ ಕರಂದ್ಲಾಜೆಯವರು ಸಂತಾಪ ಸೂಚಿಸಿದ್ದಾರೆ. ಸರಳ ಸಜ್ಜನ ನಾಯಕರಾಗಿ ರಾಷ್ಟ್ರ ಮಟ್ಟದಲ್ಲಿ ತಮ್ಮ ಛಾಪನ್ನು ಬೆಳೆಸಿಕೊಂಡಿದ್ದ ಅವರು ಉಡುಪಿ ಸಂಸದರಾಗಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಅವರ ಸೇವೆ ಸ್ಮರಣೀಯ. ದೇವರು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಹಾಗೂ ಅವರ ಬಂಧು-ಮಿತ್ರರಿಗೆ ಅಗಲಿಕೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!