Sunday, September 26, 2021
spot_img
Homeಸ್ಥಳೀಯ ಸುದ್ದಿಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಸಚಿವ ಸುನಿಲ್ ಕುಮಾರ್ ಶೋಕ

ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಸಚಿವ ಸುನಿಲ್ ಕುಮಾರ್ ಶೋಕ

ಸಂಸದರಾಗಿ ಆಸ್ಕರ್‌ ಸೇವೆ ಅನನ್ಯವಾದುದು

ಕಾರ್ಕಳ : ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ನಿಧನಕ್ಕೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಲೋಕಸಭಾ ಸದಸ್ಯರಾಗಿ, ರಾಜ್ಯಸಭಾ ಸದಸ್ಯರಾಗಿ ಅವರು ಸಲ್ಲಿಸಿದ ಸೇವೆ ಅನನ್ಯವಾದದು. ಐದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಆಸ್ಕರ್ ಫರ್ನಾಂಡಿಸ್ ಉಡುಪಿಯಲ್ಲಿ ಹುಟ್ಟಿ,ನಂತರ ರಾಷ್ಟ್ರ ಮಟ್ಟದ ನಾಯಕರಾಗಿ ಬೆಳೆದದ್ದು ಒಂದು ಸಾಹಸಗಾಥೆ. ಅವರ ನಿಧನದಿಂದ ರಾಜ್ಯ ಮತ್ತು ರಾಷ್ಟ್ರ ಒಬ್ಬ ಅತ್ಯುತ್ತಮ ಜನನಾಯಕನನ್ನು ಕಳೆದುಕೊಂಡಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ. ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಸಚಿವ ಸುನಿಲ್ ಕುಮಾರ್ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!