Sunday, September 26, 2021
spot_img
Homeರಾಜ್ಯವಿಚ್ಛೇದಿತ ಪುತ್ರಿಗೆ ಅನುಕಂಪದ ಉದ್ಯೋಗ ನೀಡಲಾಗದು: ಸುಪ್ರೀಂ ಕೋರ್ಟ್

ವಿಚ್ಛೇದಿತ ಪುತ್ರಿಗೆ ಅನುಕಂಪದ ಉದ್ಯೋಗ ನೀಡಲಾಗದು: ಸುಪ್ರೀಂ ಕೋರ್ಟ್

ನವದೆಹಲಿ: ಸರಕಾರಿ ಉದ್ಯೋಗಿಯ ವಿಚ್ಛೇದಿತ ಪುತ್ರಿಗೆ ಅನುಕಂಪದ ನೌಕರಿಯ ಕುರಿತಂತೆ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ನೀಡಿದ್ದು, ಸರಕಾರಿ ನೌಕರರು ಮರಣ ಹೊಂದಿದ ಬಳಿಕ ಅವರ ಪುತ್ರಿ ವಿವಾಹ ವಿಚ್ಛೇದನ ಪಡೆದರೆ ಅಂತಹ ಸಂದರ್ಭದಲ್ಲಿ ವಿಚ್ಛೇದಿತ ಪುತ್ರಿಗೆ ಅನುಕಂಪದ ಅಧಾರದಲ್ಲಿ ಸರಕಾರಿ ಉದ್ಯೋಗ ನೀಡಲಾಗದು ಎಂದು ಹೇಳಿದೆ.
ದಿ.ಪಿ. ಭಾಗ್ಯಮ್ಮ ಅವರು ಮಂಡ್ಯ ಜಿಲ್ಲೆಯ ಖಜಾನೆಯಲ್ಲಿ ಸೆಕೆಂಡ್‌ ಡಿವಿಜನ್‌ ಅಸಿಸ್ಟೆಂಟ್‌ ಆಗಿ ಕಾರ್ಯನಿರ್ವಹಿಸುತಿದ್ದರು. ಅನುಕಂಪದ ಆಧಾರದ ಮೇರೆಗೆ ಅವರ ಪುತ್ರಿ ವಿ. ಸೌಮ್ಯಶ್ರೀ ಅವರಿಗೆ ಉದ್ಯೋಗ ನೀಡುವಂತೆ ಕರ್ನಾಟಕ ಹೈಕೋರ್ಟ್‌ ನಿರ್ದೇಶನ ನೀಡಿತ್ತು. ಇದನ್ನು ಪ್ರಶ್ನಿಸಿ ಕರ್ನಾಟಕ ಸರಕಾರ ಖಜಾನೆ ನಿರ್ದೇಶಕರು ಸುಪ್ರೀಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದರು. ಸೌಮ್ಯಶ್ರೀ ಅವರು ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆಯಲು ಅರ್ಹರಲ್ಲ ಎಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಎನ್‌. ಆರ್.‌ ಶಾ ಮತ್ತು ನ್ಯಾ ಅನಿರೊದ್ದ ಬೋಸ್‌ ನ್ಯಾಯಪೀಠ ಈ ತೀರ್ಪು ನೀಡಿದೆ.
ಉದ್ಯೋಗವನ್ನೇ ಅವಲಂಬಿಸಿದ್ದ ಮದುವೆಯಾಗದ ಅಥವಾ ವಿಧವೆ ಪುತ್ರಿಗೆ ಮಾತ್ರ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಬಹುದುದಾಗಿದೆ. ಸರಕಾರಿ ಉದ್ಯೋಗಿಯ ವಿಚ್ಛೇದಿತ ಪುತ್ರಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಲು ಅವಕಾಶವಿಲ್ಲ ಎಂದು ಪೀಠಿಕೆ ಹೇಳಿಕೆ ನೀಡಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!