Homeರಾಜ್ಯಸಿದ್ದರಾಮಯ್ಯ ಅವರನ್ನು  ಮತ್ತೆ ವಿರೋಧ ಪಕ್ಷದಲ್ಲಿ ಕೂರಿಸುವುದೇ ನನ್ನ ಗುರಿ: ಯಡಿಯೂರಪ್ಪ

Related Posts

ಸಿದ್ದರಾಮಯ್ಯ ಅವರನ್ನು  ಮತ್ತೆ ವಿರೋಧ ಪಕ್ಷದಲ್ಲಿ ಕೂರಿಸುವುದೇ ನನ್ನ ಗುರಿ: ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ ನಂತರ ಯಡಿಯೂರಪ್ಪ ಮೊದಲ ಬಾರಿಗೆ ವಿಧಾನಸಭೆ ಅಧಿವೇಶನದಲ್ಲಿ ಪಾಲ್ಗೋಂಡರು, 2023 ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಪಣ ತೊಟ್ಟಿರುವುದಾಗಿ ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉತ್ತಮ ಆಡಳಿತ ನಡೆಸುತ್ತಿದ್ದಾರೆ, ಅವರಿಗೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ಹೇಳಿದ್ದಾರೆ. ಇನ್ನೂ ಸದನ ಆರಂಭಕ್ಕೂ ಮುನ್ನ ಸಿಎಂ ಬಸವರಾಜ ಬೊಮ್ಮಾಯಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು. 

ಪಕ್ಷದ ಒಬ್ಬ ಸಾಮಾನ್ಯ ಶಾಸಕನಂತೆ ಕೆಲಸ ಮಾಡುತ್ತೇನೆ, ನಾವು ನಮ್ಮ ಅಧ್ಯಕ್ಷರು ರಾಜ್ಯಾದ್ಯಂತ ಪ್ರವಾಸ ಮಾಡ್ತೇವೆ. ಒಬ್ಬ ಶಾಸಕನಾಗಿ ಕೆಲಸ ಮಾಡ್ತೇನೆ. ಸಿಎಂ ಆಗಿಯೇ ಕೆಲಸ ಮಾಡಬೇಕು ಅಂತ ಏನು ಇಲ್ಲ. ಸರ್ಕಾರದ ಒಳ್ಳೆಯ ಕೆಲಸಗಳನ್ನು ಶ್ಲಾಘಿಸುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದರು. ಮುಂದಿನ ದಿನ ಸಿದ್ದರಾಮಯ್ಯ ಆಕಸ್ಮಾತ್ ಆಗಿ ಗೆದ್ದರೂ, ಅವರನ್ನು ವಿರೋಧ ಪಕ್ಷದಲ್ಲಿಯೇ ಕೂರಿಸುತ್ತೇನೆ  ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

Latest Posts

error: Content is protected !!