Sunday, September 26, 2021
spot_img
Homeಸ್ಥಳೀಯ ಸುದ್ದಿಸ್ವಾವಲಂಬಿ ಬದುಕು ಕಟ್ಟಿಕೊಂಡಾಗ ಸಾಮಾಜಿಕ ಪ್ರಗತಿ - ಸುಮಾ ಕೇಶವ್‌

ಸ್ವಾವಲಂಬಿ ಬದುಕು ಕಟ್ಟಿಕೊಂಡಾಗ ಸಾಮಾಜಿಕ ಪ್ರಗತಿ – ಸುಮಾ ಕೇಶವ್‌

ಕಾರ್ಕಳ : ಮಹಿಳೆಯರು ಸಾಮಾಜಿಕವಾಗಿ ಪ್ರಗತಿ ಸಾಧಿಸಬೇಕಾದರೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು. ಉದ್ಯಮ, ಆಡಳಿತ, ರಾಜಕೀಯ ಹೀಗೆ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರಿಂದು ಮುಂಚೂಣಿಯಾಗಿ ಗುರುತಿಸಿಕೊಂಡಿರುತ್ತಾರೆ. ಸರಕಾರದ ವಿವಿಧ ಯೋಜನೆ, ಸೌಲಭ್ಯ ಪಡೆದುಕೊಂಡು ಆರ್ಥಿಕವಾಗಿ ಮಹಿಳೆ ಸ್ವತಂತ್ರರಾಗುತ್ತಿರುವುದು ಸಂತಸದ ವಿಚಾರವೆಂದು ಪುರಸಭಾ ಅಧ್ಯಕ್ಷೆ ಸುಮಾ ಕೇಶವ್‌ ಅಭಿಪ್ರಾಯಪಟ್ಟರು.

ಅವರು ಸೆ. 14ರಂದು ಶ್ರೀನಿವಾಸ ಸೇವಾ ಟ್ರಸ್ಟ್ ಅಧೀನದಲ್ಲಿರುವ ಸುಮೇಧ ಫ್ಯಾಶನ್ ಇನ್ಸ್ಟಿಟ್ಯೂಟ್ ಆಶ್ರಯದಲ್ಲಿ ಉಚಿತ ಎಂಬ್ರಾಯ್ಡರಿ ತರಬೇತಿ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಮಹಿಳೆಯರು ತಮ್ಮ ಮನೆಯ ಜವಾಬ್ದಾರಿಯನ್ನು ನಿರ್ವಹಿಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು. ಸುಮೇಧ ಫ್ಯಾಶನ್ ಇನ್ಸ್ಟಿಟ್ಯೂಟ್ ಕಾರ್ಕಳದಲ್ಲಿ ಮಹಿಳೆಯರಿಗಾಗಿ ವಿವಿಧ ತರಬೇತಿ ನೀಡುತ್ತಿರುವುದು ಉತ್ತಮ ಕಾರ್ಯವೆಂದರು.
ಕಾರ್ಕಳ ಸುರಕ್ಷಾ ಆಶ್ರಮದ ಆಯಿಷಾ, ಶ್ರೀಶ ಹಾಗೂ ಪುಷ್ಪ ಉಪಸ್ಥಿತರಿದ್ದರು. ಸುಮೇಧ ಫ್ಯಾಶನ್ ಇನ್ಸ್ಟಿಟ್ಯೂಟ್ ಅಧ್ಯಕ್ಷೆ ಸಾಧನ ಮಾತನಾಡಿ, ಸಂಸ್ಥೆ ಪ್ರಾರಂಭವಾದ ದಿನಗಳಿಂದ ಆರು ತಿಂಗಳಿಗೊಮ್ಮೆ ಉಚಿತ ತರಬೇತಿ ನೀಡುತ್ತಿದ್ದೇವೆ. ನಮ್ಮ ಸಂಸ್ಥೆಯಲ್ಲಿ ಕಲಿತ 286 ವಿದ್ಯಾರ್ಥಿಗಳು ಸ್ವಂತ ಉದ್ಯೋಗ ಹಾಗೂ ಪ್ರತಿಷ್ಠಿತ ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು. ದೀಕ್ಷಾ ಸ್ವಾಗತಿಸಿ, ಸಹನಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!