Saturday, October 16, 2021
spot_img
HomeUncategorizedವಿಶ್ವಕಪ್‌ ಬಳಿಕ ನಾಯಕತ್ವಕ್ಕೆ ಗುಡ್‌ ಬೈ- ವಿರಾಟ್‌ ಕೊಹ್ಲಿ ಘೋಷಣೆ!

ವಿಶ್ವಕಪ್‌ ಬಳಿಕ ನಾಯಕತ್ವಕ್ಕೆ ಗುಡ್‌ ಬೈ- ವಿರಾಟ್‌ ಕೊಹ್ಲಿ ಘೋಷಣೆ!

ಬೆಂಗಳೂರು: ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಭಾರತ ತಂಡದ ನಾಯಕತ್ವವನ್ನು ಬಿಡುವ ನಿರ್ಧಾರ ಮಾಡಿರುವುದಾಗಿ ಟೀಮ್ ಇಂಡಿಯಾ ಕಪ್ತಾನ ವಿರಾಟ್‌ ಕೊಹ್ಲಿ ಗುರುವಾರ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ವಿರಾಟ್‌ ಕೊಹ್ಲಿ, ಮುಂಬರುವ ಐಸಿಸಿ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿ ಬಳಿಕ ಒಡಿಐ ಮತ್ತು ಟಿ20 ತಂಡಗಳ ನಾಯಕತ್ವ ಬಿಡಲಿದ್ದಾರೆ ಎಂದು ವರದಿಗಳಾಗಿತ್ತು. ಈ ಬೆಳವಣಿಗೆಯನ್ನು ಬಿಸಿಸಿಐ ತಳ್ಳಿ ಹಾಕಿತ್ತು ಕೂಡ. ಈಗ ಖುದ್ದಾಗಿ ವಿರಾಟ್‌ ಕೊಹ್ಲಿ ಈ ಸುದ್ದಿ ಸ್ಫೋಟ ಮಾಡಿದ್ದು, ವಿಶ್ವಕಪ್‌ ಬಳಿಕ ಕೇವಲ ಟಿ20 ತಂಡದ ನಾಯಕತ್ವದಿಂದ ಕೆಳೆಗಿಳಿಯುವ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ ಮತ್ತು ಟೆಸ್ಟ್‌ ಕ್ರಿಕೆಟ್‌ ನಾಯಕತ್ವದಲ್ಲಿ ಮುಂದುವರಿಯುವುದಾಗಿ ಸ್ಪಷ್ಟ ಪಡಿಸಿದ್ದಾರೆ.
ನನ್ನ ಸಂಪೂರ್ಣ ಸಾಮರ್ಥ್ಯದೊಂದಿಗೆ ಭಾರತ ತಂಡವನ್ನು ಪ್ರತಿನಿಧಿಸುವ ಮತ್ತು ಮುನ್ನಡೆಸುವ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟವೇ ಸರಿ. ನನ್ನ ಈ ಪಯಣದಲ್ಲಿ ಬೆಂಬಲಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ಹೇಳಲು ಬಯಸುತ್ತೇನೆ. ತಂಡದ ಆಟಗಾರರು, ಸಹಾಯಕ ಸಿಬ್ಬಂದಿ, ಆಯ್ಕೆ ಸಮಿತಿ, ಕೋಚ್‌ಗಳು ಹಾಗೂ ಭಾರತ ತಂಡದ ಅಭಿಮಾನಿಗಳ ಬೆಂಬಲ ಇಲ್ಲದೆ ನನಗೆ ಏನನ್ನೂ ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ,” ಎಂದು ಕೊಹ್ಲಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ವಿಚಾರವನ್ನು ಈಗಾಗಗಲೇ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್‌ ಶಾ ಅವರ ಗಮನಕ್ಕೆ ತಂದಿರುವುದಾಗಿ ಕೊಹ್ಲಿ ತಿಳಿಸಿದ್ದಾರೆ. ವಿರಾಟ್‌ ಕೊಹ್ಲಿ ನಾಯಕತ್ವ ಬಿಡುವ ನಿರ್ಧಾರದೊಂದಿಗೆ, ಅನುಭವಿ ಆರಂಭಿಕ ಬ್ಯಾಟ್ಸ್‌ಮನ್‌ ರೋಹಿತ್‌ ಶರ್ಮಾ ಟಿ20 ತಂಡದ ಕಪ್ತನನಾಗಿ ಕಾಣಿಸಿಕೊಳ್ಳುವುದು ಬಹುತೇಕ ಖಾತ್ರಿಯಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!