Thursday, December 2, 2021
spot_img
HomeUncategorizedರಾಷ್ಟ್ರೀಯ ಮುಕ್ತ ಚಾಂಪಿಯನ್‌ಶಿಪ್‌ ಹೆಪ್ಟಾಥ್ಲಾನ್‌ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕಾರ್ಕಳದ ಅಕ್ಷತಾ

ರಾಷ್ಟ್ರೀಯ ಮುಕ್ತ ಚಾಂಪಿಯನ್‌ಶಿಪ್‌ ಹೆಪ್ಟಾಥ್ಲಾನ್‌ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕಾರ್ಕಳದ ಅಕ್ಷತಾ

ಕಾರ್ಕಳ : ತೆಲಂಗಾಣದ ವಾರಂಗಲ್‌ನಲ್ಲಿ ನಡೆದ ರಾಷ್ಟ್ರೀಯ ಮುಕ್ತ ಚಾಂಪಿಯನ್‌ಶಿಪ್‌ನ ಹೆಪ್ಟಾಥ್ಲಾನ್‌ ಸ್ಪರ್ಧೆಯಲ್ಲಿ ಕಾರ್ಕಳ ತಾಲೂಕು ಕೆರ್ವಾಶೆ ಗ್ರಾಮದ ಅಕ್ಷತಾ ಪೂಜಾರಿ ಅವರು 4939 ಅಂಕಗಳೊಂದಿಗೆ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಕೆರ್ವಾಶೆ ಅಂಗು ಪೂಜಾರಿ ಹಾಗೂ ಜಯಂತಿ ದಂಪತಿ ಪುತ್ರಿಯಾಗಿರುವ ಅಕ್ಷತಾ ಕೆರ್ವಾಶೆ ಬಂಗ್ಲೆಗುಡ್ಡೆ ಶಾಲೆಯಲ್ಲಿ ತನ್ನ ಪ್ರಾಥಮಿಕ ವಿದ್ಯಾಭ್ಯಾಸ ಪೂರೈಸಿರುತ್ತಾರೆ. ಬಳಿಕ ಕೆರ್ವಾಶೆ ಮೈನ್‌ ಶಾಲೆ, ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಪಡೆದಿರುವ ಅಕ್ಷತಾ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಪಿಯು ಮತ್ತು ಪದವಿ ಪೂರೈಸಿರುತ್ತಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!