Saturday, October 16, 2021
spot_img
HomeUncategorizedಪ್ರಧಾನಿ ಹುಟ್ಟು ಹಬ್ಬದಂಗವಾಗಿ ಮೂಡುಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಪ್ರಧಾನಿ ಹುಟ್ಟು ಹಬ್ಬದಂಗವಾಗಿ ಮೂಡುಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಕಾರ್ಕಳ : ಬಂಡೀಮಠ ಶ್ರೀ ಮೂಡುಗಣಪತಿ ದೇವಸ್ಥಾನದಲ್ಲಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ನಡೆಯಿತು. ಭಾರತೀಯ ಜನತಾಪಕ್ಷದ ವತಿಯಿಂದ ಪ್ರಾರ್ಥನೆ ಸಲ್ಲಿಸಲಾಯಿತು. ಶ್ರೀ ದೇವಳದ ಪ್ರಧಾನ ಅರ್ಚಕ ಗಣೇಶ್‌ ಭಟ್‌, ವೆಂಕಟರಮಣ ಭಟ್‌, ಅನಂತ ಭಟ್‌, ಆಡಳಿತ ಮಂಡಳಿಯ ಹರೀಶ್‌ ಶೆಣೈ, ನಗರಾಧ್ಯಕ್ಷ ರವೀಂದ್ರ ಮೊಯ್ಲಿ, ಪುರಸಭಾ ಅಧ್ಯಕ್ಷೆ ಸುಮಾ ಕೇಶವ್‌, ಉಪಾಧ್ಯಕ್ಷೆ ಪಲ್ಲವಿ, ಪುರಸಭೆ ಸದಸ್ಯ ಸಂತೋಷ್‌ ರಾವ್‌, ನಿರಂಜನ್‌ ಜೈನ್‌, ಶಶಿಕಲಾ ಶೆಟ್ಟಿ, ಅಶೋಕ್‌ ಸುವರ್ಣ ಮತ್ತು ಸುಮಾ ರವಿಕಾಂತ್‌, ಸುರೇಖಾ ಕಾಮತ್‌, ವೀಣಾ ಪ್ರಭು, ಸಂದ್ಯಾ ನಾಯಕ್‌, ಸುಂದರ ಪ್ರಭು, ಚಂದ್ರ ಆಚಾರ್ಯ ಉಪಸ್ಥಿತರಿದ್ದರು.

ಬೈಲೂರಿನಲ್ಲಿ ಮಾಹಿತಿ ಕಾರ್ಯಾಗಾರ

ಕಾರ್ಕಳ : ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು-ಹಬ್ಬದ ಅಂಗವಾಗಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಕಳ ವತಿಯಿಂದ ಬೈಲೂರು ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಸೇವೆ ಮತ್ತು ಸಮರ್ಪಣೆ ಅಭಿಯಾನದಂಗವಾಗಿ ವಿದ್ಯಾರ್ಥಿನಿಯರಿಗೆ ಹದಿಹರೆಯದ ಹೆಣ್ಣು ಮಕ್ಕಳ ಆರೋಗ್ಯ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಅಜೆಕಾರು ಪ್ರಾಥಮಿಕ ಕೇಂದ್ರ ವೈದ್ಯೆ ಡಾ. ಅನುಷಾ ಶೆಟ್ಟಿ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಸವಿತಾ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ರವೀಂದ್ರ ಕುಮಾರ್, ಮಹಿಳಾ ಮೋರ್ಚಾ ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ, ಉಪಪ್ರಾಂಶುಪಾಲ ನಾಗರಾಜ್, ಮಾಜಿ ಜಿಲ್ಲಾ ಪಂಚಾಯತ್ ನಿಕಟಪೂರ್ವ ಸದಸ್ಯ ಸುಮಿತ್ ಶೆಟ್ಟಿ, ಬಿಜೆಪಿ ಮಹಿಳಾ ಮೋರ್ಚಾ ಮಲ್ಲಿಕಾ ರಾವ್, ಉಪಾಧ್ಯಕ್ಷರಾದ ಪಲ್ಲವಿ ಪ್ರವೀಣ್, ಜ್ಯೋತಿ ರಮೇಶ್, ನಗರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಾ ರವಿಕಾಂತ್, ಮಂಜುಳಾ ಶೆಟ್ಟಿ ಉಪಸ್ಥಿತರಿದ್ದರು. ಡಾ. ಅನುಷಾ ಶೆಟ್ಟಿ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ವಿನಯಾ ಡಿ ಬಂಗೇರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ದೀಕ್ಷಿತಾ ಶೆಟ್ಟಿ ವಂದಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!