Saturday, October 16, 2021
spot_img
Homeಸ್ಥಳೀಯ ಸುದ್ದಿಕಾರ್ಕಳ ಯುವ ಬಂಟರ ಸಂಘದಿಂದ 1.25 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ

ಕಾರ್ಕಳ ಯುವ ಬಂಟರ ಸಂಘದಿಂದ 1.25 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ

ಕಾರ್ಕಳ : ಕಾರ್ಕಳ, ಹೆಬ್ರಿ ತಾಲೂಕಿನ ಬಂಟ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸೆ. 19ರಂದು ಸವಿತಾ ಹೊಟೇಲ್‌ ಸಭಾಂಗಣದಲ್ಲಿ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಅಶೋಕ್ ಅಡ್ಯಂತಾಯ ಕಾರ್ಯಕ್ರಮ ಉದ್ಘಾಟಿಸಿದರು. ವಿವಿಧ ತರಗತಿಗಳ ಪ್ರತಿಭಾನ್ವಿತ 80 ವಿದ್ಯಾರ್ಥಿಗಳಿಗೆ 1.25 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಿಸಲಾಯಿತು. ಸುರೇಂದ್ರ ಶೆಟ್ಟಿ, ಸಂದೀಪ್ ಶೆಟ್ಟಿ ಸಾಣೂರು, ಶ್ಯಾಮ್ ಶೆಟ್ಟಿ ನಲ್ಲೂರು, ಉದ್ಯಮಿ ಶಿವಣ್ಣ ಶೆಟ್ಟಿ, ಸುನೀತಾ ಸಿರಿಯಣ್ಣ ಶೆಟ್ಟಿ , ರಾಕೇಶ್‌ ಶೆಟ್ಟಿ ಉಪಸ್ಥಿತರಿದ್ದರು. ಯುವ ಬಂಟರ ಸಂಘದ ಅಧ್ಯಕ್ಷ ಅವಿನಾಶ್ ಜಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಸನ್ಮಾನ
ಪುರಸಭೆಯ ನೂತನ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಅವಿನಾಶ್ ಶೆಟ್ಟಿ ಹಾಗೂ ಕರ್ನಾಟಕ ಕ್ವಾರಿ ಓನರ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾದ ರವೀಂದ್ರಶೆಟ್ಟಿ ಬಜಗೋಳಿ ಅವರನ್ನು ಸನ್ಮಾನಿಸಲಾಯಿತು. ಮುಟ್ಲುಪಾಡಿ ಸುಹಾಸ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!