Thursday, December 2, 2021
spot_img
Homeಸ್ಥಳೀಯ ಸುದ್ದಿಸೆ. 25 : ಕಾಂಗ್ರೆಸ್‌ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ‌

ಸೆ. 25 : ಕಾಂಗ್ರೆಸ್‌ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ‌

ಕೆಪಿಸಿಸಿ ಕಾರ್ಯದರ್ಶಿ ಸುಧೀರ್‌ ಕುಮಾರ್‌ ಮರೋಳಿ ಭಾಗಿ

ನ್ಯೂಸ್‌ ಕಾರ್ಕಳದಲ್ಲಿ ಲೈವ್‌

ಕಾರ್ಕಳ : ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸುವ ನೆಪದಲ್ಲಿ ಪುರಾತನ ಶ್ರದ್ಧಾ ಕೇಂದ್ರಗಳನ್ನು ಧ್ವಂಸಗೊಳಿಸುತ್ತಿರುವ ಬಿಜೆಪಿ ಸರಕಾರದ ನಡೆಯನ್ನು ವಿರೋಧಿಸಿ ಸೆ. 25ರಂದು ಅನಂತಶಯನದಲ್ಲಿ ಬೃಹತ್‌ ಪಂಜಿನ ಮೆರವಣಿಗೆ ನಡೆಯಲಿದೆ.
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಮತ್ತು ಕಾರ್ಕಳ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್, ಕಾರ್ಕಳ ನಗರ ಕಾಂಗ್ರೆಸ್ ಸಹಯೋಗದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಸುಧೀರ್ ಕುಮಾರ್ ಮುರೋಳಿ ಭಾಗವಹಿಸಲಿದ್ದಾರೆ. ಪಂಜಿನ ಮೆರವಣಿಗೆಯು ಕಾರ್ಕಳ ಅನಂತಶಯನ ದೇವಸ್ಥಾನದಿಂದ ಕಾರ್ಕಳ ಬಸ್‌ ನಿಲ್ದಾನದವರೆಗೆ ನಡೆಯಲಿದೆ. ಹಿಂದು ಧರ್ಮ, ಧಾರ್ಮಿಕ ಭಾವನೆಗಳ ವಿಚಾರದಲ್ಲಿ ರಾಜಕೀಯ ಮಾಡುವ ಬಿಜೆಪಿಯು ದೇವಸ್ಥಾನ ಧ್ವಂಸ ವಿಚಾರದಲ್ಲಿ ಅಧಿಕಾರಿಗಳ ಮೇಲೆ ಆರೋಪ ಹೊರಿಸಿ ತಾನು ನುಣುಚಿಕೊಳ್ಳುವ ಯತ್ನವನ್ನು ಮಾಡುತ್ತಿದೆ. ಇದನ್ನು ಖಂಡಿಸಿ ಈ ಬಗ್ಗೆ ಜನರಿಗೆ ಸತ್ಯ ಸಂಗತಿ ತಿಳಿಸುವ ಸಲುವಾಗಿ ಪಂಜಿನ ಮೆರವಣಿ ಹಮ್ಮಿಕೊಳ್ಳಲಾಗಿದೆ. ಪಕ್ಷದ ನಾಯಕರು ಭಾಗವಹಿಸಲಿದ್ದಾರೆ ಎಂದು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಬೇಲಾಡಿ ತಿಳಿಸಿದ್ದಾರೆ.

ನ್ಯೂಸ್‌ ಕಾರ್ಕಳದಲ್ಲಿ ಲೈವ್

ಪಂಜಿನ ಮೆರವಣಿಗೆ ಬಳಿಕ ಕಾರ್ಕಳ ಬಸ್‌ ನಿಲ್ದಾಣದಲ್ಲಿ ನಡೆಯುವ ಸಭೆಯನ್ನು ಉದ್ದೇಶಿಸಿ ಸುಧೀರ್ ಕುಮಾರ್ ಮುರೋಳಿ ಮಾತನಾಡಲಿರುವರು. ಈ ಕಾರ್ಯಕ್ರಮವನ್ನು ನ್ಯೂಸ್‌ ಕಾರ್ಕಳದಲ್ಲಿ ನೇರ ಪ್ರಸಾರ ಮಾಡಲಾಗುವುದು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!