Saturday, October 16, 2021
spot_img
HomeUncategorizedಅಕ್ರಮ ಗೋ ಸಾಗಾಟ ಮತ್ತು ಮತಾಂತರ ಚಟುವಟಿಕೆಗಳ ವಿರುದ್ಧ ಕಠಿಣ ಕೈಗೊಳ್ಳುವಂತೆ ಸುನಿಲ್ ಕುಮಾರ್ ಸೂಚನೆ

ಅಕ್ರಮ ಗೋ ಸಾಗಾಟ ಮತ್ತು ಮತಾಂತರ ಚಟುವಟಿಕೆಗಳ ವಿರುದ್ಧ ಕಠಿಣ ಕೈಗೊಳ್ಳುವಂತೆ ಸುನಿಲ್ ಕುಮಾರ್ ಸೂಚನೆ

ಕಾರ್ಕಳ : ಇತ್ತೀಚಿನ ದಿನಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗೋ ಸಾಗಾಟ ಮತ್ತು ಮತಾಂತರದಂತಹ ಕಾನೂನು ಬಾಹಿರ ಚಟುವಟಿಕೆಗಳನ್ನು ಹತ್ತಿಕ್ಕುವಂತೆ ಹಾಗೂ ಕಠಿಣ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖಾ ಸಚಿವ ವಿ. ಸುನಿಲ್ ಕುಮಾರ್ ಕಟ್ಟು ನಿಟ್ಟಿನ ಸೂಚನೆ ನೀಡಿದರು. ಸೆ. 24ರಂದು ಕಾರ್ಕಳ ಪ್ರವಾಸಿ ಬಂಗಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಸಚಿವರು ಜಿಲ್ಲೆ ಹಾಗೂ ತಾಲೂಕಿನ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್‌ ಹೆಚ್ಚಿಸಿ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡುವ ಮೂಲಕ ವಾಹನ ತಪಾಸಣೆ, ಈ ಹಿಂದೆ ಅಕ್ರಮ ಗೋ ಸಾಗಾಣಿಕೆಯಲ್ಲಿ ಭಾಗಿಯಾಗಿದ್ದ ಶಂಕಿತರನ್ನು ಮತ್ತು ಮಧ್ಯವರ್ತಿಗಳನ್ನು ಠಾಣೆಗೆ ಕರೆಸಿ ವಿಚಾರಣೆಗೆ ಒಳಪಡಿಸುವಂತೆ ತಿಳಿಸಿದರು. ಪೊಲೀಸ್ ಠಾಣಾಧಿಕಾರಿಗಳ ಗಸ್ತಿಗೆ ಸುಸಜ್ಜಿತ ವಾಹನಗಳನ್ನು ಹಂಚಿಕೆ ಮಾಡುವಂತೆ ಸೂಚಿಸಿದಲ್ಲದೇ ಎಲ್ಲ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಕೆಗಳ ವಿರುದ್ಧ ಜಾಗೃತಿ ಸಭೆಗಳನ್ನು ನಡೆಸುವಂತೆ ಸಲಹೆ ನೀಡಿದರು. ಸಭೆಯಲ್ಲಿ ಕುಂದಾಪುರ ಸಹಾಯಕ ಕಮಿಷನರ್, ಕಾರ್ಕಳ ತಹಶೀಲ್ದಾರ್ ಹಾಗೂ ಜಿಲ್ಲೆಯ ಮೂರು ಪೊಲೀಸ್ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!