ಬೆಳ್ಮಣ್‍ : 50 ಲಕ್ಷ ರೂ. ವೆಚ್ಚದ ಮೀನು ಮಾರುಕಟ್ಟೆಗೆ ಶಿಲಾನ್ಯಾಸ

ಬೆಳ್ಮಣ್ : ಗ್ರಾಮೀಣ ಭಾಗದ ಅಭಿವೃದ್ಧಿ ಕೆಲಸಗಳಿಗೆ ಹೈಟೆಕ್‌ ಸ್ಪರ್ಶ ನೀಡಿದಾಗ ನಗರ ಪ್ರದೇಶದಂತೆ ಮಿಂಚಲು ಸಾಧ್ಯ. ಬೆಳೆಯುತ್ತಿರುವ ಬೆಳ್ಮಣ್ ಪೇಟೆಗೆ ಮಾರುಕಟ್ಟೆಯ ಅಗತ್ಯವಿದ್ದು ಸುಮಾರು 50 ಲಕ್ಷ ರೂ. ವೆಚ್ಚದ ಮೀನು ಮಾರುಕಟ್ಟೆ ನಿರ್ಮಾಣಗೊಳ್ಳುತ್ತಿದೆ ಎಂದು ವಿ. ಸುನೀಲ್ ಕುಮಾರ್ ಹೇಳಿದರು.
ಅವರು ಶನಿವಾರ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅನುದಾನ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸುಸಜ್ಜಿತ ಮೀನು ಮಾರುಕಟ್ಟೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ ಮಾತನಾಡಿ, ಬೆಳ್ಮಣ್‌ನಲ್ಲಿ ಸುಸಜ್ಜಿತ ಮಾರುಕಟ್ಟೆಯ ಅವಶ್ಯಕತೆಯಿತ್ತು. ಹಲವು ಕಾಲದ ಬೇಡಿಕೆಯ ಹಿನ್ನೆಲೆಯಲ್ಲಿ ಇದೀಗ ನೂತನ ಮಾರುಕಟ್ಟೆಯ ನಿರ್ಮಾಣವಾಗೊಳ್ಳುತ್ತಿದ್ದು, ಕಾಮಗಾರಿಯು ನಿರ್ಮಿತಿ ಕೇಂದ್ರದ ಮೂಲಕ ನಡೆಯಲಿದೆ ಎಂದರು.
ಬೆಳ್ಮಣ್ ಗ್ರಾಮ ಪಂಚಾಯತ್ ಅಧ್ಯಕ್ಷ ಜನಾರ್ದನ ತಂತ್ರಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ರೇಶ್ಮಾ ಉದಯ್ ಶೆಟ್ಟಿ, ತಾ.ಪಂ. ಮಾಜಿ ಸದಸ್ಯೆ ಆಶಾ ದೇವೇಂದ್ರ ಶೆಟ್ಟಿ, ಮುಂಬೈ ಉದ್ಯಮಿ ಕೃಷ್ಣ ಶೆಟ್ಟಿ ಕಾಪಿಕೆರೆ, ಪಂಚಾಯತ್‌ ಉಪಾಧ್ಯಕ್ಷೆ ಸಹಾನ ಕುಂದರ್ ಸೂಡ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿʼಸೋಜಾ, ಪಂಚಾಯತ್ ಪಿಡಿಒ ಪ್ರಕಾಶ್, ದೇವೇಂದ್ರ ಶೆಟ್ಟಿ, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು. ಸರ್ವಜ್ಞ ತಂತ್ರಿ ಕಾರ್ಯಕ್ರಮ ನಿರ್ವಹಿಸಿದರು.





























































































































































































































error: Content is protected !!
Scroll to Top