ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಸಿಎಸಿಎಸ್ ಕಾರ್ಯಾಗಾರ

ಸಿಎ ಕಷ್ಟವಲ್ಲ- ಅದೊಂದು ವಿಶೇಷ ಅಧ್ಯಯನ : ಗೋಪಾಲಕೃಷ್ಣ ಭಟ್

ಕಾರ್ಕಳ : ಭಾರತದಂತಹ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರದಲ್ಲಿ ವಾಣಿಜ್ಯ ಕ್ಷೇತ್ರದಲ್ಲಿ ಅತ್ಯಂತ ಹೆಚ್ಚಿನ ಅವಕಾಶಗಳಿವೆ. ಹಾಗೆಯೇ ಹೊಸ ಉದ್ದಿಮೆಗಳನ್ನು ಸ್ಥಾಪಿಸಲೂ ಸಹ ಸರಕಾರದಿಂದ ಪ್ರೋತ್ಸಾಹ ನೀಡಲಾಗುತ್ತಿದೆ. ಇಂತಹ ಸಂಸ್ಥೆಗಳಿಗೆ ಕೌಶಲ್ಯ ಹೊಂದಿರುವ ಅಭ್ಯರ್ಥಿಗಳ ಅವಶ್ಯಕತೆಯಿದೆ ಎಂದು ತ್ರಿಶಾ ಕಾಲೇಜಿನ ಸ್ಥಾಪಕ ಗೋಪಾಲಕೃಷ್ಣ ಭಟ್ ಹೇಳಿದರು.
ಅವರು ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ನಡೆದ ಕಾರ್ಯಗಾರದಲ್ಲಿ ಮಾತನಾಡಿದರು. ದೇಶದಲ್ಲಿ ಚಾರ್ಟೆಡ್ ಅಕೌಂಟೆಂಟ್ (ಸಿ.ಎ.)ಗಳ ಕೊರತೆ ಇದೆ. ಪ್ರತಿ ವರ್ಷ ಬೆರಳೆಣಿಕೆಯಷ್ಟೇ ಮಂದಿ ಸಿ.ಎ. ಪಾಸಾಗುತ್ತಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ಸಿ.ಎ. ಕ್ಷೇತ್ರದ ಕಡೆಗೆ ಹೆಚ್ಚಿನ ಗಮನ ಹರಿಸಬೇಕೆಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ವಿದ್ವಾನ್ ಗಣಪತಿ ಭಟ್, ವಿದ್ಯಾರ್ಥಿಗಳು ಜೀವನದಲ್ಲಿ ತಮಗೆ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಯಶಸ್ಸು ಗಳಿಸಬೇಕೆಂದರು. ಸ್ಥಾಪಕ ಸದಸ್ಯರಾದ ಅಶ್ವಥ್. ಎಸ್. ಎಲ್. ಉಪನ್ಯಾಸಕರಾದ ರಾಘವೇಂದ್ರ ರಾವ್, ಉಮೇಶ್, ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು. ಆದಿತ್ಯ ಸ್ವಾಗತಿಸಿ, ತ್ರಿಶಾ ಕಾರ್ಯಕ್ರಮ ನಿರೂಪಿಸಿ, ಶೆರಿಲ್ ವಂದಿಸಿದರು.





























































































































































































































error: Content is protected !!
Scroll to Top