ಕಾರ್ಕಳ : ತೆಲಂಗಾಣದ ವಾರಂಗಲ್ನಲ್ಲಿ ನಡೆದ ರಾಷ್ಟ್ರೀಯ ಮುಕ್ತ ಚಾಂಪಿಯನ್ಶಿಪ್ನ ಹೆಪ್ಟಾಥ್ಲಾನ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕಾರ್ಕಳ ತಾಲೂಕು ಕೆರ್ವಾಶೆ ಗ್ರಾಮದ ಅಕ್ಷತಾ ಪೂಜಾರಿ ಅವರನ್ನು ಭವ್ಯ ಸ್ವಾಗತದೊಂದಿಗೆ ಕಾರ್ಕಳಕ್ಕೆ ಬರಮಾಡಿಕೊಳ್ಳಲಾಯಿತು. ಸೆ. 26ರಂದು ಕುಕ್ಕುಂದೂರು ಗ್ರಾಮದ ಅಯ್ಯಪ್ಪನಗರದಲ್ಲಿ ಅಕ್ಷತಾ ಅವರನ್ನು ಸ್ವಾಗತಿಸಲಾಯಿತು. ಬಿಜೆಪಿ ರಾಜ್ಯ ವಕ್ತಾರ ಗಣೇಶ್ ಕಾರ್ಣಿಕ್, ಯುವರಾಜ್ ಶೆಟ್ಟಿ, ಯೋಗೀಶ್ ಸಾಲ್ಯಾನ್, ಭರತ್ ಶೆಟ್ಟಿ, ರವಿಕುಮಾರ್ ಶೆಟ್ಟಿ, ಚಿರಂಜೀವಿ ವಿಜಯ್ ಉಪಸ್ಥಿತರಿದ್ದರು.

ಕೆರ್ವಾಶೆಯಲ್ಲಿ ಸನ್ಮಾನ
ಊರವರ ಪರವಾಗಿ ಕೆರ್ವಾಶೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಅಕ್ಷತಾ ಅವರಿಗೆ ರವಿವಾರ ಸಂಜೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಸಚಿವ ಸುನಿಲ್ ಕುಮಾರ್, ಉದ್ಯಮಿ ಮಹೇಶ್ ಶೆಟ್ಟಿ ಕುಡುಪುಲಾಜೆ, ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ ಮೊದಲಾದವರು ಉಪಸ್ಥಿತರಿರುವರು.
Congratulations akshatha god blessed forever