Saturday, October 16, 2021
spot_img
HomeUncategorizedಹೆಬ್ರಿ : ಬಿಜೆಪಿ ಶಕ್ತಿ ಕೇಂದ್ರ ವ್ಯಾಪ್ತಿಯ ಬೂತ್‌ ಮಟ್ಟದ ಕಾರ್ಯಕರ್ತರ ಕಾರ್ಯಾಗಾರ

ಹೆಬ್ರಿ : ಬಿಜೆಪಿ ಶಕ್ತಿ ಕೇಂದ್ರ ವ್ಯಾಪ್ತಿಯ ಬೂತ್‌ ಮಟ್ಟದ ಕಾರ್ಯಕರ್ತರ ಕಾರ್ಯಾಗಾರ

ಹೆಬ್ರಿ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡಲಾಗುವುದು

ಕಾರ್ಕಳ : ಭಾರತೀಯ ಜನತಾ ಪಕ್ಷ ಹೆಬ್ರಿ ಶಕ್ತಿ ಕೇಂದ್ರ ವ್ಯಾಪ್ತಿಯ ಬೂತ್ ಮಟ್ಟದ ಕಾರ್ಯಕರ್ತರ ಕಾರ್ಯಾಗಾರ ಶಿವಪುರ ಲಕ್ಷ್ಮೀನಾರಾಯಣ ದೇಗುಲ ಸೂರಿಮಣ್ಣು ಸಭಾಂಗಣದಲ್ಲಿ ಸೆ. 25ರಂದು ನಡೆಯಿತು. ಸಚಿವ ಸುನಿಲ್ ಕುಮಾರ್ ಮಾತನಾಡಿ, ಡೀಮ್ಡ್ ಫಾರೆಸ್ಟ್ ಸಮಸ್ಯೆ ಇತ್ಯರ್ಥಗೊಳಿಸಿ ಮನೆಕಟ್ಟಿ ಕುಳಿತವರಿಗೆ ಶೀಘ್ರದಲ್ಲೇ ಹಕ್ಕುಪತ್ರ ನೀಡಲಾಗುವುದು. ವಿದ್ಯುತ್‌ ನಿಂದ ವಂಚಿತ ಮನೆಯವರಿಗೆ ವಿದ್ಯುತ್‌ ಸಂಪರ್ಕ ನೀಡಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕರ್ತರ ಹೊಣೆ
ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸುವ ಹೊಣೆ ಕಾರ್ಯಕರ್ತರದ್ದು. ಹೆಬ್ರಿ ತಾಲೂಕಿನ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡಲಾಗುವುದು ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ ಮಹಾವೀರ ಹೆಗ್ಡೆ ಪಕ್ಷ ಸಂಘಟನೆ ಕುರಿತು ಮಾಹಿತಿ ನೀಡಿದರು.
ಮೆಸ್ಕಾಂ ನಿರ್ದೇಶಕ ದಿನೇಶ್ ಪೈ ಮುನಿಯಾಲು, ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಶೆಟ್ಟಿ, ಗ್ರಾಮ ಸಮಿತಿ ಅಧ್ಯಕ್ಷ ಗಣೇಶ್ ಕುಲಾಲ್, ಸಂದೇಶ್ ಶೆಟ್ಟಿ, ಅಮೃತ್ ಕುಮಾರ್ ಶೆಟ್ಟಿ, ಸುಧಾಕರ ಹೆಗ್ಡೆ, ಸೀತರಾಮ್ ಗಾಣಿಗ, ಸಂತೋಷ್ ಶೆಟ್ಟಿ, ಜಯಪ್ರಕಾಶ್ ಹೆಗ್ಡೆ ಮತ್ತು ಜಿಲ್ಲಾ ಪಂಚಾಯತ್ ನಿಕಟಪೂರ್ವ ಸದಸ್ಯೆ ಜ್ಯೋತಿ ಹರೀಶ್, ತಾಲೂಕು ಪ್ರಧಾನ ಕಾರ್ಯದರ್ಶಿ ನವೀನ್ ನಾಯಕ್, ಗುರುದಾಸ್ ಶೆಣೈ, ಸದಾಶಿವ ಉಪಾಧ್ಯಾಯ ಸೂರಿಮಣ್ಣು, ಉಪಾಧ್ಯಕ್ಷ ಸುರೇಶ್ ಶೆಟ್ಟಿ ಶಿವಪುರ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಮೀಳಾ ಹರೀಶ್, ಹೆಬ್ರಿ ತಾಲೂಕು ಪಂಚಾಯತ್ ನ ಅಧ್ಯಕ್ಷರು, ಉಪಾಧ್ಯಕ್ಷರು ಕಾರ್ಯಕರ್ತರು ಉಪಸ್ಥಿತರಿದ್ದರು. ಶಕ್ತಿ ಕೇಂದ್ರದ ಅಧ್ಯಕ್ಷ ರಮೇಶ್ ಕುಮಾರ್ ಸ್ವಾಗತಿಸಿ, ನಿರೂಪಿಸಿದರು. ಸುಹಾಸ್‌ ಶೆಟ್ಟಿ ಮುಟ್ಲುಪಾಡಿ ವಂದಿಸಿದರು.

ಸಚಿವ ಸುನಿಲ್‌ ಕುಮಾರ್‌ ಶಿವಪುರ ಶಂಕರಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರುಶನ ಪಡೆದರು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಮಹಾಬಲೇಶ್ವರ ಅಡಿಗ ಅರ್ಚಕ ರಂಗನಾಥ್ ಭಟ್, ಸಮಿತಿ ಸದಸ್ಯ ರಾಘವೇಂದ್ರ ಪೂಜಾರಿ, ತಾಲ್ಲೂಕು ಪಂಚಾಯತ್ ನಿಕಟ ಪೂರ್ವ ಅಧ್ಯ‌ಕ್ಷ ರಮೇಶ್ ಕುಮಾರ್, ಸುರೇಶ್ ಶೆಟ್ಟಿ ಶಿವಪುರ, ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಗಣೇಶ್ ಕುಲಾಲ್, ಪಂಚಾಯತ್ ಅಧ್ಯಕ್ಷ‌ ಶೇಖರ್ ಶೆಟ್ಟಿ, ಉಪಾಧ್ಯಕ್ಷೆ ಶ್ವೇತಾ ಹಾಗೂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!