Saturday, October 16, 2021
spot_img
HomeUncategorizedನಲ್ಲೂರು : ಯಕ್ಷಗಾನ ತರಬೇತಿ ಕಾರ್ಯಾಗಾರ ಉದ್ಘಾಟನೆ

ನಲ್ಲೂರು : ಯಕ್ಷಗಾನ ತರಬೇತಿ ಕಾರ್ಯಾಗಾರ ಉದ್ಘಾಟನೆ

ಕಾರ್ಕಳ : ಯುವಚೇತನ ಯುವಕ ಸಂಘ ಪರಪ್ಪಾಡಿ ನಲ್ಲೂರು ಮತ್ತು ಪರಪ್ಪಾಡಿ ಶಾಲಾಭಿವೃದ್ಧಿ ಸಮಿತಿ ಸಂಯುಕ್ತಾಶ್ರಯದಲ್ಲಿ ಪ್ರಾರಂಭವಾದ ಯಕ್ಷಗಾನ ತರಬೇತಿ ಕಾರ್ಯಾಗಾರವನ್ನು ಸೆ. 26ರಂದು ನಲ್ಲೂರು ಗ್ರಾಮ ಪಂಚಾಯತ್ ಸದಸ್ಯ ಸುಂದರ ದೀಪ ಬೆಳಗಿಸಿ ಉದ್ಘಾಟಿಸಿದರು. ಯಕ್ಷಗಾನ ತರಬೇತಿಗಾರ ಸತೀಶ್ ಮಡಿವಾಳ, ಶಾಲಾ ಮುಖ್ಯ ಶಿಕ್ಷಕಿ ಪೂರ್ಣಿಮಾ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೇಯಾಂಸ ಜೈನ್, ಯುವಚೇತನ ಯುವಕ ಸಂಘದ ಅಧ್ಯಕ್ಷೆ ಗಾಯತ್ರಿ ಪ್ರಭು, ನಲ್ಲೂರು ಪಂಚಾಯತ್ ಸದಸ್ಯರಾದ ಶೋಭಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತರಬೇತಿ ಕಾರ್ಯಗಾರದಲ್ಲಿ ಸುಮಾರು 40 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ಸ್ವಾಗತಿಸಿ, ನಿರೂಪಿಸಿದರು. ಶಶಿಕಾಂತ ವಂದಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!