Tuesday, December 7, 2021
spot_img
Homeರಾಜ್ಯಸಿದ್ದರಾಮಯ್ಯನವರೇ ದೊಡ್ಡ ಭಯೋತ್ಪಾದಕ ಅನ್ನಿಸುತ್ತಿದೆ : ನಳಿನ್ ಕುಮಾರ್ ಕಟೀಲ್

ಸಿದ್ದರಾಮಯ್ಯನವರೇ ದೊಡ್ಡ ಭಯೋತ್ಪಾದಕ ಅನ್ನಿಸುತ್ತಿದೆ : ನಳಿನ್ ಕುಮಾರ್ ಕಟೀಲ್

ಮಂಗಳೂರು: ಸಿದ್ದರಾಮಯ್ಯನವರೇ ತಾಲಿಬಾನ್ ಸಂಸ್ಕೃತಿ ಹೊಂದಿದವರು, ಅವರು ದೊಡ್ಡ ಭಯೋತ್ಪಾದಕ ಅನ್ನಿಸುತ್ತಿದೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.
ಬಿಜೆಪಿ, ಆರೆಸ್ಸೆಸ್ ತಾಲಿಬಾನ್ ಸಂಸ್ಕೃತಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಮಂಗಳೂರಿನಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಸಿದ್ದರಾಮಯ್ಯನವರೇ ತಾಲಿಬಾನ್ ಸಂಸ್ಕೃತಿ ಹೊಂದಿದವರು, ಅವರು ದೊಡ್ಡ ಭಯೋತ್ಪಾದಕ ಅನಿಸುತ್ತಿದೆ. ಅವರು ಸಿಎಂ ಆಗಿದ್ದಾಗ 24ಕ್ಕೂ ಹೆಚ್ಚು ಹಿಂದೂಗಳ ಹತ್ಯೆಯಾಗಿತ್ತು. ಕಾಂಗ್ರೆಸ್ ಆಡಳಿತದಲ್ಲಿಯೇ ರಾಜ್ಯದಲ್ಲಿ ಹೆಚ್ಚು ಕೊಲೆ, ಸುಲಿಗೆ, ಮರಣ, ನಿತ್ಯ ಗೋಹತ್ಯೆ ನಡೆಯುತ್ತಿತ್ತು ಎಂದು ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಅತಂತ್ರ ಸ್ಥಿತಿಯಲ್ಲಿದೆ. ಹೀಗಾಗಿ ಇಂತಹ ಹೇಳಿಕೆಗಳನ್ನು ಅವರು ನೀಡುತ್ತಿದ್ದಾರೆ. ದ. ಕ. ಒಂದೇ ಜಿಲ್ಲೆಯನ್ನು ತೆಗೆದುಕೊಂಡು ನೋಡಿದಾಗ ಶರತ್ ಮಡಿವಾಳ, ದೀಪಕ್ ರಾವ್ , ಪ್ರತಾಪ್ ಪೂಜಾರಿ ಹೀಗೆ ಹಲವು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ. ಸುಳ್ಯದಲ್ಲಿ ಕಾಲೇಜಿಗೆ ಹೋಗುವ ವಿದ್ಯಾರ್ಥಿನಿಯನ್ನು ಚೂರಿಯಿಂದ ಇರಿದು ಕೊಲ್ಲಲಾಗಿದೆ. ಎಟಿಎಂ ಒಳಗೆ ಹೋದ ಮಹಿಳೆ ಮೇಲೆ ಹಲ್ಲೆಯಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!