Thursday, December 2, 2021
spot_img
Homeಸ್ಥಳೀಯ ಸುದ್ದಿಬಜಗೋಳಿ : ನೇತ್ರ ತಪಾಸಣಾ ಶಿಬಿರ

ಬಜಗೋಳಿ : ನೇತ್ರ ತಪಾಸಣಾ ಶಿಬಿರ

ಕಾರ್ಕಳ : ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಕಳ, ಅಲ್ಪ ಸಂಖ್ಯಾತ ಮೋರ್ಚಾ ಇದರ ವತಿಯಿಂದ ಪ್ರಧಾನಿ ಮೋದಿಯವರ 71ನೇ ಜನ್ಮದಿನದ ಪ್ರಯುಕ್ತ ಸೇವೆ ಮತ್ತು ಸಮರ್ಪಣೆ ಅಭಿಯಾನದಂಗವಾಗಿ ಅ. 3ರಂದು ಬಜಗೋಳಿ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಬೃಹತ್ ನೇತ್ರ ತಪಾಸಣಾ ಚಿಕಿತ್ಸಾ ಶಿಬಿರ ನಡೆಯಿತು. ಉಡುಪಿ ಜಿಲ್ಲಾ ಭಾಜಪ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಶಿಬಿರ ಉದ್ಘಾಟಿಸಿ ಶುಭಹಾರೈಸಿದರು.

ಹಿಂ.ವ. ಮೋ. ಅಧ್ಯಕ್ಷ ರಮಾನಂದ ನಲ್ಲೂರು ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ನವೀನ್ ನಾಯಕ್, ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಸುರೇಂದ್ರ ಪಣಿಯೂರು, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜೆರಾಲ್ಡ್ ಡಿʼಸಿಲ್ವಾ, ಡಾ. ಸಚಿನ್, ಅರುಣ್ ಶೆಟ್ಟಿ, ಮುಡಾರು ಅಶೋಕ್ ಪೂಜಾರಿ, ಬಜಗೋಳಿ ಸುಹಾಸ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. 110 ಮಂದಿ ತಪಾಸಣೆ ನಡೆಸಿದರು. ಸುರೇಶ ಸಾಲಿಯಾನ್ ಪ್ರಾರ್ಥಿಸಿ, ಶ್ರೀನಿವಾಸ ಪೂಜಾರಿ ಸ್ವಾಗತಿಸಿದರು. ದಿವಾಕರ ಬಂಗೇರ ಕಾರ್ಯಕ್ರಮ ನಿರೂಪಿಸಿ, ಸದಾನಂದ ಸಾಲಿಯಾನ್ ವಂದಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!