Thursday, August 18, 2022
spot_img
Homeಸ್ಥಳೀಯ ಸುದ್ದಿರಶ್ಮಿ ಚಾರಿಟೇಬಲ್‌ ಟ್ರಸ್ಟ್‌ ವತಿಯಿಂದ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

ರಶ್ಮಿ ಚಾರಿಟೇಬಲ್‌ ಟ್ರಸ್ಟ್‌ ವತಿಯಿಂದ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

ಅರ್ಜಿ ಆಹ್ವಾನ : ಅ. 20 ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ

ಕಾರ್ಕಳ : ರಶ್ಮಿ ಚಾರಿಟೇಬಲ್‌ ಟ್ರಸ್ಟ್‌ ವತಿಯಿಂದ ಬಿಲ್ಲವ ಸಮಾಜ ಸೇವಾ ಸಂಘದ ಸಹಯೋಗದೊಂದಿಗೆ ನೀಡಲಾಗುವ ವಿದ್ಯಾರ್ಥಿವೇತನಕ್ಕಾಗಿ ಕಾರ್ಕಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬಿಲ್ಲವ ಸಮಾಜದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ದ್ವಿತೀಯ ಪಿಯುಸಿಯಿಂದ ಉನ್ನತ ವ್ಯಾಸಂಗ ಮಾಡುತ್ತಿರುವ 2020-2021 ನೇ ಶೈಕ್ಷಣಿಕ ವರ್ಷದಲ್ಲಿ ಶೇ. 85ಕ್ಕಿಂತ ಅಧಿಕ ಅಂಕ ಪಡೆದಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದಾಗಿದೆ. ಸ್ಥಳೀಯ ಬಿಲ್ಲವ ಸಂಘ ಮತ್ತು ಅನಂತಶಯನದ ಎಪಿ ಟವರ್‌ನಲ್ಲಿರುವ ರಶ್ಮಿ ಚಾರಿಟೇಬಲ್‌ ಟ್ರಸ್ಟ್‌ ಕಚೇರಿಯಲ್ಲಿ ಅರ್ಜಿ ನಮೂನೆ ಲಭ್ಯವಿದ್ದು, ಅಕ್ಟೋಬರ್‌ 20ರೊಳಗೆ ಆಯಾ ಸಂಘಗಳಿಗೆ ಅರ್ಜಿಗಳನ್ನು ಸಲ್ಲಿಸುವಂತೆ ಟ್ರಸ್ಟ್‌ ಅ‍ಧ್ಯಕ್ಷೆ ಸಾವಿತ್ರಿ ಡಿ.ಆರ್.‌ ರಾಜು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9449166492, 9449167959, 9845685005 ನಂಬರ್‌ ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!