Wednesday, January 19, 2022
spot_img
HomeUncategorizedಪ್ರಕರಣವೊಂದರ ವಿಚಾರಣೆಗಾಗಿ ಸುಳ್ಯ ಕೋರ್ಟ್‌ಗೆ ಆಗಮಿಸಿದ ಡಿಕೆ ಶಿವಕುಮಾರ್

ಪ್ರಕರಣವೊಂದರ ವಿಚಾರಣೆಗಾಗಿ ಸುಳ್ಯ ಕೋರ್ಟ್‌ಗೆ ಆಗಮಿಸಿದ ಡಿಕೆ ಶಿವಕುಮಾರ್

ಸುಳ್ಯ : ಈ ಹಿಂದೆ ಇಂಧನ ಸಚಿವರಾಗಿದ್ದ ಸಂದರ್ಭ ದಾಖಲಿಸಲಾಗಿದ್ದ ಪ್ರಕರಣದ ವಿಚಾರಣೆಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಅ. 5ರಂದು ಸುಳ್ಯ ಕೋರ್ಟ್ ಗೆ ಆಗಮಿಸಿ ಹೇಳಿಕೆ ದಾಖಲಿಸಿದ್ದಾರೆ.

ಇದಕ್ಕೂ ಮುನ್ನ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ನಾನು ಇಂಧನ ಸಚಿವನಾಗಿದ್ದ ಸಂದರ್ಭದಲ್ಲಿ ಯಾವುದೋ ವ್ಯಕ್ತಿ ಕರೆ ಮಾಡಿ ಬಾಯಿಗೆ ಬಂದಂತೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ನಂತರ ಅಧಿಕಾರಿಗಳು ದೂರು ದಾಖಲಿಸಿದ್ದರು. ನಂತರ ಆತ ಆ ಅಧಿಕಾರಿಗಳಿಗೂ ನಿಂದನೆ ಮಾಡಿದ್ದ. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಯಾಗಿ ಬರುವಂತೆ ನ್ಯಾಯಾಲಯ ಸೂಚಿಸಿತ್ತು. ಕೋರ್ಟ್ ಆದೇಶದ ಮೇರೆಗೆ ಬಂದಿದ್ದೇನೆ ಎಂದು ಹೇಳಿದರು.

2016ರ ಫೆಬ್ರವರಿ 28ರಂದು ಸುಳ್ಯ ತಾಲೂಕಿನ ಬೆಳ್ಳಾರೆಯ ಸಾಯಿ ಗಿರಿಧರ್ ರೈ ತನ್ನೂರಿನಲ್ಲಿ ನಿರಂತರವಾಗಿ ಕಾಡುತ್ತಿದ್ದ ವಿದ್ಯುತ್ ಸಮಸ್ಯೆ ಬಗ್ಗೆ ಆಗಿನ ಕಾಂಗ್ರೆಸ್ ಸರ್ಕಾರದಲ್ಲಿ ಇಂಧನ ಸಚಿವರಾಗಿದ್ದ ಡಿ. ಕೆ. ಶಿವಕುಮಾರ್‌ಗೆ ದೂರವಾಣಿ ಕರೆ ಮಾಡಿದ್ದರು. ವಿದ್ಯುತ್ ಸಮಸ್ಯೆ ಬಗ್ಗೆ ಸಚಿವರ ಬಳಿ ಹೇಳಿದ್ದರು. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದ್ದು, ಪರಸ್ಪರ ಅವ್ಯಾಚ್ಯ ಶಬ್ಧಗಳ ಬಳಕೆ ಕೂಡಾ ಮಾಡಿದ್ದರು. ಈದಾದ ಬಳಿಕ ಡಿ.ಕೆ. ಶಿವಕುಮಾರ್ ಮೆಸ್ಕಾಂ ಎಂಡಿ ಮೂಲಕ ಅಂದಿನ ಸುಳ್ಯ ಪ್ರಭಾರ ಎಇಇ ಹರೀಶ್ ನಾಯಕ್ ಎಂಬುವವರು ಸಾಯಿ ಗಿರಿಧರ್ ರೈ ವಿರುದ್ಧ ಸುಳ್ಯ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ಸದ್ಯಕ್ಕೆ ಸುಳ್ಯ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಪ್ರಮುಖ ಸಾಕ್ಷಿಯನ್ನಾಗಿ ಡಿ. ಕೆ. ಶಿವಕುಮಾರ್‌ರನ್ನು ಕೋರ್ಟ್ ಪರಿಗಣಿಸಿತ್ತು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!