Tuesday, December 7, 2021
spot_img
HomeUncategorizedರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಂದ ಸರ್ವ ಧರ್ಮ ಪ್ರಾರ್ಥನೆ

ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಂದ ಸರ್ವ ಧರ್ಮ ಪ್ರಾರ್ಥನೆ

ಕಾರ್ಕಳ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಉಡುಪಿ, ಸ್ಥಳೀಯ ಸಂಸ್ಥೆ ಕಾರ್ಕಳ, ಜೈನ್ ಮಿಲನ್ ಕಾರ್ಕಳ ಇವರ ಸಹಯೋಗದಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಂದ ಕಾರ್ಕಳದ ಐತಿಹಾಸಿಕ ಗೊಮ್ಮಟ ಬೆಟ್ಟದಲ್ಲಿ ಅ. 5ರಂದು ಸರ್ವಧರ್ಮ ಪ್ರಾರ್ಥನೆ ನಡೆಯಿತು. ಕಾರ್ಕಳ ಸ್ಥಳೀಯ ಸಂಸ್ಥೆ ಅಧ್ಯಕ್ಷ ಎಂ.ಕೆ. ವಿಜಯ ಕುಮಾರ್ ದೀಪ ಬೆಳಗಿಸಿ ಶುಭ ಹಾರೈಸಿದರು. ಜಿಲ್ಲಾ ಗೈಡ್ ಆಯುಕ್ತೆ ಜ್ಯೋತಿ ಜೆ. ಪೈ, ಕಾರ್ಕಳ ಸ್ಥಳೀಯ ಸಂಸ್ಥೆ ಉಪಾಧ್ಯಕ್ಷ ಜಗದೀಶ್ ಹೆಗ್ಡೆ, ಸಹಾಯಕ ಜಿಲ್ಲಾ ಆಯುಕ್ತೆ ವೃಂದಾ ಹರಿಪ್ರಕಾಶ್ ಶೆಟ್ಟಿ, ಜೈನ್ ಮಿಲನ್ ಉಪಾಧ್ಯಕ್ಷ ಅಮರನಾಥ್, ಜೈನ್ ಮಿಲನ್ ಜಿಲ್ಲಾ ಸಹ ಕಾರ್ಯದರ್ಶಿ ಶಶಿಕಲಾ ಕೆ. ಹೆಗ್ಡೆ, ಎಸ್ ಎನ್ ವಿಪಿ ಕಾಲೇಜು ಉಪನ್ಯಾಸಕ ವೀರೇಂದ್ರ, ಜಿಲ್ಲಾ ಸ್ಕೌಟ್ ಸಂಘಟಕ ನಿತಿನ್ ಅಮಿನ್, ಗೈಡ್ ಸಂಘಟಕಿ ಸುಮನ ಶೇಖರ್, ಕಾರ್ಯದರ್ಶಿ ಗಣೇಶ್ ಜಾಲ್ಸೂರು, ರೋವರ್ ಶರತ್, ಸ್ಕೌಟ್ ಶಿಕ್ಷಕ ಹರೀಶ್, ಗೈಡ್ ಶಿಕ್ಷಕಿ ಸೀಮಾ ಕಾಮತ್, ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಯುವ ಜೈನ್ ಮಿಲನ್ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಜೈನ್ ಮಿಲನ್ ಕಾರ್ಯದರ್ಶಿ ಜಗದೀಶ್ ಹೆಗ್ಡೆ ಸಹಕರಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!