Tuesday, December 7, 2021
spot_img
Homeಜಿಲ್ಲಾಕೇರಳದ ಮೂಲದ ವಿದ್ಯಾರ್ಥಿನಿ ಮಂಗಳೂರಿನ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ

ಕೇರಳದ ಮೂಲದ ವಿದ್ಯಾರ್ಥಿನಿ ಮಂಗಳೂರಿನ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ

ಮಂಗಳೂರು: ಕೇರಳದ ಮೂಲದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಮಂಗಳೂರಿನ ಕಾಲೇಜು ಹಾಸ್ಟೆಲ್ ನಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಕಾರಣ ಏನು ಎನ್ನುವುದನ್ನು ತನ್ನ ಡೈರಿಯಲ್ಲಿ ವಿದ್ಯಾರ್ಥಿನಿ ಬರೆದಿಟ್ಟಿದ್ದಾರೆ ಎಂದು ವರದಿಯಾಗಿದೆ.

ಮಂಗಳೂರು ಕದ್ರಿಯಲ್ಲಿ ಈ ಘಟನೆ ನಡೆದಿದ್ದು, 19 ವರ್ಷ ವಯಸ್ಸಿನ ನೀನಾ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿಯಾಗಿದ್ದು, ಇವರು ಕೇರಳದ ಕಾಸರಗೋಡಿನ ನಿವಾಸಿಯಾಗಿದ್ದಾರೆ. ನಗರದ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎಸ್ ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು.

ತಮ್ಮ ಡೆತ್ ನೋಟ್ ನಲ್ಲಿ, ತಾಯಿಗೆ ಕಷ್ಟ ಇದೆ. ನನ್ನ ವಿದ್ಯಾಭ್ಯಾಸದ ಆರ್ಥಿಕ ಹೊರೆಯಾಗುತ್ತಿದೆ. ನನಗೂ ವಿದ್ಯಾಭ್ಯಾಸಕ್ಕೆ ಪೂರ್ಣ ಗಮನ ನೀಡಲಾಗುತ್ತಿಲ್ಲ. ವಿದ್ಯಾಭ್ಯಾಸದಲ್ಲಿಯೂ ಹಿಂದೆ ಬಿದ್ದಿದ್ದೇನೆ. ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!