Saturday, October 16, 2021
spot_img
Homeಸ್ಥಳೀಯ ಸುದ್ದಿಹೆಬ್ರಿ ಹೋಬಳಿ ರಚನೆಗೆ ಕ್ಯಾಬಿನೆಟ್‌ ಅನುಮೋದನೆ -ಸುನಿಲ್‌ ಕುಮಾರ್‌

ಹೆಬ್ರಿ ಹೋಬಳಿ ರಚನೆಗೆ ಕ್ಯಾಬಿನೆಟ್‌ ಅನುಮೋದನೆ -ಸುನಿಲ್‌ ಕುಮಾರ್‌

ಕಾರ್ಕಳ : ಹೆಬ್ರಿ ತಾಲೂಕಾಗಿ ಘೋಷಣೆಯಾಗಿದ್ದರೂ ಹೋಬಳಿಯಾಗಿರದ ಕಾರಣದಿಂದ ಹಲವಾರು ಆಡಳಿತಾತ್ಮಕ ಸಮಸ್ಯೆಗಳು ತಲೆದೋರುತ್ತಿದ್ದವು. ಇದೀಗ ಹೆಬ್ರಿ ಹೋಬಳಿ ರಚನೆಗೆ ಕ್ಯಾಬಿನೆಟ್‌ ಅನುಮೋದನೆ ದೊರೆತಿದೆ ಎಂದು ಸಚಿವ ಸುನಿಲ್‌ ಕುಮಾರ್‌ ತಿಳಿಸಿದ್ದಾರೆ.

ಹೆಬ್ರಿ ತಾಲೂಕು ರಚನೆಗೊಂಡು ತಾಲೂಕು ಕಚೇರಿ ಆರಂಭವಾಗಿದ್ದರೂ ಬಹುತೇಕ ಗ್ರಾಮಗಳು ಅಜೆಕಾರು ಹೋಬಳಿಗೆ ಒಳಗೊಂಡಿತ್ತು. ಹೆಬ್ರಿ ತಾಲೂಕಿನ ಸಾರ್ವಜನಿಕರು ಕಂದಾಯ ಇಲಾಖೆಯ ಸೇವೆ ಪಡೆಯಲು ಅಜೆಕಾರು ನಾಡ ಕಚೇರಿಯನ್ನೇ ಸಂಪರ್ಕಿಸುವ ಅನಿವಾಯರ್ತೆಯಿತ್ತು. ಎರಡೂ ಕಡೆ ಒಬ್ಬರೇ ಕಂದಾಯ ನಿರೀಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿತ್ತು.
ಈ ಎಲ್ಲ ಸಮಸ್ಯೆಗಳನ್ನು ಮನಗಂಡು ಸಚಿವರಾದ ವಿ. ಸುನಿಲ್ ಕುಮಾರ್ ಅವರು ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಮನವಿ ಮಾಡಿಕೊಂಡ ಮೇರೆಗೆ ಸಚಿವ ಸಂಪುಟ ಸಭೆಗೆ ಅನುಮೋದನೆಗಾಗಿ ಕಡತವನ್ನು ಇರಿಸಲಾಗಿತ್ತು. ಹೋಬಳಿ ರಚನೆ ಬಗ್ಗೆ ಶೀಘ್ರ ಸರ್ಕಾರಿ ಆದೇಶ ಜಾರಿಯಾಗಲಿದ್ದು, ತದನಂತರ ಹೆಬ್ರಿ ತಾಲೂಕು ಕೇಂದ್ರದಲ್ಲಿಯೇ ಕಂದಾಯ ಸೇವೆಗಳು ಲಭ್ಯವಾಗಲಿದೆ. ಹೆಬ್ರಿ ಕೇಂದ್ರ ಸ್ಥಾನಕ್ಕೆ ಓರ್ವ ಕಂದಾಯ ನಿರೀಕ್ಷಕರು ಹಾಗೂ ಇನ್ನಿತರ ಹುದ್ದೆಗಳು ಸೃಷ್ಠಿಯಾಗಲಿದೆ. ಇದರಿಂದ ತಾಲೂಕಿನ ಸಾರ್ವಜನಿಕರಿಗೆ ತ್ವರಿತವಾಗಿ ಮತ್ತು ನಿಗದಿತ ಕಾಲಮಿತಿಯಲ್ಲಿ ಸೇವೆ ಪಡೆಯಲು ಅನುಕೂಲವಾಗಲಿದೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!