Saturday, October 16, 2021
spot_img
Homeರಾಜ್ಯಹಾನಗಲ್- ಶಿವರಾಜ ಸಜ್ಜನರ್, ಸಿಂಧಗಿಗೆ ರಮೇಶ್ ಭೂಸನೂರ್ ಬಿಜೆಪಿ ಅಭ್ಯರ್ಥಿ

ಹಾನಗಲ್- ಶಿವರಾಜ ಸಜ್ಜನರ್, ಸಿಂಧಗಿಗೆ ರಮೇಶ್ ಭೂಸನೂರ್ ಬಿಜೆಪಿ ಅಭ್ಯರ್ಥಿ

ಬೆಂಗಳೂರು: ಹಾನಗಲ್ ಹಾಗೂ ಸಿಂದಗಿ ವಿಧಾನಸಭೆ‌ ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಹಾನಗಲ್‌ನಲ್ಲಿ ವಿಧಾನ ಪರಿಷತ್‌ನ ಮಾಜಿ ಸದಸ್ಯ ಶಿವರಾಜ ಸಜ್ಜನರ್ ಅವರನ್ನು ಹಾಗೂ ಸಿಂದಗಿಯಲ್ಲಿ ಮಾಜಿ ಶಾಸಕ ರಮೇಶ ಭೂಸನೂರ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. 

ಸಿಂದಗಿ ಕ್ಷೇತ್ರಕ್ಕೆ ರಮೇಶ ಭೂಸನೂರ ಅವರಿಗೆ‌ ನಿರೀಕ್ಷೆಯಂತೆ‌ ಟಿಕೆಟ್ ನೀಡಲಾಗಿದೆ. ಹಾನಗಲ್ ನಲ್ಲಿ ಸಂಸದ ಶಿವಕುಮಾರ ಉದಾಸಿ ಅವರ ಪತ್ನಿ ರೇವತಿ ಅವರಿಗೆ ಟಿಕೆಟ್ ನೀಡಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ. 

ಈ ಎರಡೂ ಕ್ಷೇತ್ರದ ಉಪಚುನಾವಣೆಯನ್ನು ಬಿಜೆಪಿ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಹಾನಗಲ್ ಕ್ಷೇತ್ರವನ್ನು ಉಳಿಸಿಕೊಳ್ಳುವುದು ಬಿಜೆಪಿ ಪಾಲಿಗೆ ಪ್ರತಿಷ್ಠೆಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾಗಿರುವ ಹಿನ್ನೆಲೆಯಲ್ಲಿ ಈ ಕ್ಷೇತ್ರದ ಚುನಾವಣೆ ಮಹತ್ವ ಪಡೆದುಕೊಂಡಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!