Wednesday, January 26, 2022
spot_img
Homeಸ್ಥಳೀಯ ಸುದ್ದಿರಾಜೇಶ್‌ ಶೆಟ್ಟಿ ಕುಡುಪುಲಾಜೆ ಅವರಿಂದ ಸಮವಸ್ತ್ರ ವಿತರಣೆ

ರಾಜೇಶ್‌ ಶೆಟ್ಟಿ ಕುಡುಪುಲಾಜೆ ಅವರಿಂದ ಸಮವಸ್ತ್ರ ವಿತರಣೆ

ದುರ್ಗ-ತೆಳ್ಳಾರು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 35 ಸಾವಿರ ರೂ. ಮೌಲ್ಯದ ಕ್ರೀಡಾ ಸಮವಸ್ತ್ರ

ಕಾರ್ಕಳ : ಶ್ರೀ ಬಿ. ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರೌಢಶಾಲೆ ದುರ್ಗ-ತೆಳ್ಳಾರು ಇಲ್ಲಿನ ವಿದ್ಯಾರ್ಥಿಗಳಿಗೆ ಶಾಲಾ ಹಳೆ ವಿದ್ಯಾರ್ಥಿ ಸಂಘದ ಗೌರವಾ‍ಧ್ಯಕ್ಷ, ಮುಂಬೈ ಉದ್ಯಮಿ ರಾಜೇಶ್‌ ಶೆಟ್ಟಿ ಕುಡುಪುಲಾಜೆ ಅವರು 35 ಸಾವಿರ ರೂ. ಮೌಲ್ಯದ ಕ್ರೀಡಾ ಸಮವಸ್ತ್ರವನ್ನು ಹಸ್ತಾಂತರಿಸಿದರು. ಅ. 8ರಂದು ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮವಸ್ತ್ರ ವಿತರಿಸಲಾಯಿತು. ಈ ವೇಳೆ ಮಾತನಾಡಿದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅರುಣ್‌ ಮಾಂಜ, ರಾಜೇಶ್‌ ಶೆಟ್ಟಿ ಅವರು ಶಾಲಾ ಮೇಲಿನ ಪ್ರೀತಿ ಮತ್ತು ತಮ್ಮೂರಿನ ಮಕ್ಕಳ ಹಿತದೃಷ್ಟಿಯಿಂದ ಕ್ರೀಡಾ ಸಮವಸ್ತ್ರ ನೀಡಿರುತ್ತಾರೆ. ಶಾಲೆಯ ಅಭಿವೃದ್ಧಿಯಲ್ಲಿ ಶಾಲೆಯ ಹೆಮ್ಮೆಯ ಹಳೆಯ ವಿದ್ಯಾರ್ಥಿ ರಾಜೇಶ್‌ ಅವರ ಕೊಡುಗೆ ಅಪಾರವಾದುದು ಎಂದರು.

ವೇದಿಕೆಯಲ್ಲಿ ಸುದೇಶ್‌ ಶೆಟ್ಟಿ ಕುಡುಪುಲಾಜೆ, ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ದಿನೇಶ ನಾಯಕ್ ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಶಾಲಾ ಮುಖ್ಯಶಿಕ್ಷಕಿ ಸ್ಮಿತಾ ಭಂಡಾರಿ ಕಾರ್ಯಕ್ರಮ ನಿರ್ವಹಿಸಿದರು.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!