Saturday, October 16, 2021
spot_img
Homeರಾಜ್ಯವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ಮೈತ್ರಿ ಸರ್ಕಾರವನ್ನು ಕಿತ್ತೆಸೆದರು: ಕುಮಾರಸ್ವಾಮಿ

ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ಮೈತ್ರಿ ಸರ್ಕಾರವನ್ನು ಕಿತ್ತೆಸೆದರು: ಕುಮಾರಸ್ವಾಮಿ

ವಿರೋಧ ಪಕ್ಷದ ನಾಯಕ ಸ್ಥಾನ ಗಿಟ್ಟಿಸಿಕೊಳ್ಳಲು ಕುಮಾರಸ್ವಾಮಿ ಮೇಲೆ ಬ್ರಹ್ಮಾಸ್ತ್ರ ಬಿಟ್ಟು 23 ಮಂತ್ರಿಗಳನ್ನು ಬೀದಿಗೆ ತಂದು ನಿಲ್ಲಿಸಿದರು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಬಹಿರಂಗವಾಗಿ ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟ ಬಳಿ ಸುದ್ದಿಗಾರರರೊಂದಿಗೆ ಮಾತನಾಡುತ್ತಾ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಹೆಚ್‌ಡಿಕೆ, ಸಿದ್ದರಾಮಯ್ಯ ಜೆಡಿಎಸ್ ನಲ್ಲಿದ್ದರೆ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಗೊತ್ತಾಗಿ ಕಾಂಗ್ರೆಸ್ ಗೆ ಹೋದರು. ಹಿಂದಿನ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಕೆಡವಿದ್ದು ವಿರೋಧ ಪಕ್ಷದ ನಾಯಕ ಸ್ಥಾನ ಗಿಟ್ಟಿಸಿಕೊಂಡು ಕೂಟದ ಕಾರಿನಲ್ಲಿ ತಿರುಗಾಡಲು. ಅದಕ್ಕಾಗಿ 23 ಮಂತ್ರಿಗಳನ್ನು ಬೀದಿಗೆ ತಂದು ಅವರ ಹೊಟ್ಟೆ ಮೇಲೆ ಹೊಡೆದನು ಎಂದು ಸಿದ್ದರಾಮಯ್ಯನವರ ವಿರುದ್ಧ ಟೀಕೆ ಮಾಡಿದರು.

ನಮ್ಮ ಪಕ್ಷದ ಬಗ್ಗೆ, ನನ್ನ ಬಗ್ಗೆ ಪದೇ ಪದೇ ಕೆಣಕಲು ಬರಬೇಡಿ. ಪುಟಗೋಸಿ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಮೈತ್ರಿ ಸರ್ಕಾರವನ್ನು ಕಿತ್ತೆಸೆದವರು ಇವತ್ತು ನನ್ನ ಬಗ್ಗೆ ಮಾತನಾಡಲು ಏನು ನೈತಿಕ ಹಕ್ಕಿದೆ ಎಂದು ಪ್ರಶ್ನಿಸಿದರು.

ಇವತ್ತು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾಂಗ್ರೆಸ್ ನ ಕೊಡುಗೆಯೇ ಕಾರಣ ಎಂಬುದು ಎಲ್ಲರೂ ಅರ್ಥ ಮಾಡಿಕೊಳ್ಳುತ್ತಾರೆ. ಐಟಿ ದಾಳಿಗೆ ಸಿದ್ದರಾಮಯ್ಯನೇ ಕಾರಣ. ಸಿದ್ದರಾಮಯ್ಯ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೆ ಐಟಿ ರೇಡ್‌ಗೆ ಕಾರಣ. ಸಿದ್ದರಾಮಯ್ಯ ಪವರ್‌ಗಾಗಿ ಏನು ಬೇಕಾದರೂ ಮಾಡುತ್ತಾರೆ. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು ಸಹಾ ಅದರ ಭಾಗವಾಗಿದೆ. ಹೇಗಾದರೂ ಸರಿ ಸಿದ್ದರಾಮಯ್ಯಗೆ ಅಧಿಕಾರ ಬೇಕು ಎಂದು ಹೇಳಿದರು.

ಯಡಿಯೂರಪ್ಪ ಭೇಟಿ ಬಗ್ಗೆ ಕೇಂದ್ರಕ್ಕೂ ಮಾಹಿತಿ ಸಿಕ್ಕಿದೆ. ಯಡಿಯೂರಪ್ಪ ಅವರನ್ನು ಕಪಿಮುಷ್ಠಿಯಲ್ಲಿಟ್ಟುಕೊಳ್ಳಲು ಐಟಿ ದಾಳಿ ಮಾಡಲಾಗಿದೆ. ಐಟಿ ದಾಳಿ ಹಿಂದೆ ಸ್ಪಷ್ಟವಾಗಿ ರಾಜಕೀಯ ಉದ್ದೇಶವಿದೆ. ಅದರ ಬಗ್ಗೆ ಅನುಮಾನ ಇಲ್ಲ ಎಂದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!