Tuesday, December 7, 2021
spot_img
HomeUncategorizedಸೈಟ್ ಕೊಡಿಸುವುದಾಗಿ ವಂಚನೆ: ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ವಿರುದ್ಧ ಎಫ್ಐಆರ್ ದಾಖಲು

ಸೈಟ್ ಕೊಡಿಸುವುದಾಗಿ ವಂಚನೆ: ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ನೊದಲ ಬಾರಿಗೆ ಸರಕಾರ ರಚಿಸಿದಾಗ ಕ್ಯಾಬಿನೆಟ್ ದರ್ಜೆ ಸಚಿವರಾಗಿದ್ದ ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ವಿರುದ್ಧ ವಂಚನೆ ಆರೋಪದಲ್ಲಿ ಎಫ್ಐಆರ್ ದಾಖಲಾಗಿದೆ.
ಸೈಟ್ ಕೊಡಿಸುವುದಾಗಿ ಹಣ ಪಡೆದು, ವಂಚಿಸಿದ್ದಾರೆಂದು ಕಟ್ಟಾ ವಿರುದ್ಧ ಆರೋಪಿಸಲಾಗಿದ್ದು, 2004ರಲ್ಲಿ ಶಾಸಕರಾಗಿದ್ದಂತ ಸಂದರ್ಭದಲ್ಲಿ ವಂಚಿಸಿರುವ ಆರೋಪವಿದಾಗಿದೆ. ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಇಂಡ್ ಸಿಂಡ್ ಎಂಬ ಕಂಪನಿಯಿಂದ ಸೈಟ್ ಕೊಡಿಸುವುದಾಗಿ 2.85 ಕೋಟಿ ರೂ. ಪಡೆದಿದ್ದರು. ನಗದು ಹಾಗೂ ಚೆಕ್ ಮೂಲಕ 2.85 ಕೋಟಿ ರೂ. ಪಡೆದಿದ್ದರು. ಈ ಬಗ್ಗೆ ಹಲವು ಬಾರಿ ವಿಚಾರಿಸಿದ್ದರು. ಆದರೆ ಅವರು ಸರಿಯಾಗಿ ಪ್ರತಿಕ್ರಿಯಿಸಿರಲಿಲ್ಲ ಎಂದು ದೂರಲಾಗಿದೆ.

ಈ ಹಿನ್ನೆಲೆಯಲ್ಲಿ ಇಂಡ್ ಸಿಂಡ್ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕರು ಕೋರ್ಟ್ ಮೊರೆ ಹೋಗಿದ್ದು, ಸೈಟ್ ಮತ್ತು ಫ್ಲಾಟ್ ಕೊಡಿಸುವುದಾಗಿ ವಂಚನೆ ಮಾಡಿದ್ದಾರೆಂದು ಆರೋಪಿಸಿದ್ದಾರೆ.
ಈ ಪ್ರಕರಣವನ್ನು ವಿಚಾರಣೆ ನಡೆಸಿದ್ದ 4ನೇ ಎಸಿಎಂಎಂ ಕೋರ್ಟ್ ಕಟ್ಟಾ ಸುಬ್ರಮಣ್ಯ ನಾಯ್ಡು ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚಿಸಿತ್ತು. ಇದೀಗ ಕಟ್ಟಾ ವಿರುದ್ಧ ಎಫ್ಐಆರ್ ದಾಖಲಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!