Tuesday, December 7, 2021
spot_img
Homeಸ್ಥಳೀಯ ಸುದ್ದಿಬೈಕ್‌ - ಆಕ್ಟಿವಾ ಡಿಕ್ಕಿ - ಹೆಡ್‌ ಕಾನ್‌ಸ್ಟೆಬಲ್ ಸ್ಥಳದಲ್ಲೇ ಮೃತ್ಯು

ಬೈಕ್‌ – ಆಕ್ಟಿವಾ ಡಿಕ್ಕಿ – ಹೆಡ್‌ ಕಾನ್‌ಸ್ಟೆಬಲ್ ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ : ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಬೂಬಕ್ಕರ್(48) ರವರು ಅ.15 ರಂದು ಬಂಟ್ವಾಳ ತಾಲೂಕಿನ ನೇರಳಕಟ್ಟೆ ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ.

ಅಬೂಬಕ್ಕರ್ ರವರು ಇಂದು ಮಧ್ಯಾಹ್ನ ತಮ್ಮ ಬೈಕಿನಲ್ಲಿ ಪ್ರಯಾಣಿಸುತ್ತಿರುವ ವೇಳೆ ನೇರಳಕಟ್ಟೆ ಸಮೀಪ ಆಕ್ಟಿವಾ ವಾಹನ ಪರಸ್ಪರ ಡಿಕ್ಕಿ ಹೊಡೆದಿತ್ತು, ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಇವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆಕ್ಟಿವಾ ಸವಾರ ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾಮದ ಕೈಯ್ಯಬೆ ನಿವಾಸಿ ರಮೇಶ್ ಆಚಾರ್ಯ ರವರ ಪುತ್ರ ದುರ್ಗಾ ಪ್ರಸಾದ್ ಎಂಬವರು ಗಂಭೀರ ಗಾಯಗೊಂಡಿದ್ದು ಅವರನ್ನು ಬಂಟ್ವಾಳ ಆಸ್ಪತ್ರೆಗೆ ಸಾಗಿಸಲಾಗಿದೆ.
ಫುಟ್ ಬಾಲ್ ಆಟಗಾರರಾಗಿದ್ದ ಅಬೂಬಕ್ಕರ್ ರವರು ಮರೋಡಿ ಅಬೂಸಾಲಿ ರವರ ಪುತ್ರರಾಗಿದ್ದು, ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!