Tuesday, December 7, 2021
spot_img
Homeಸ್ಥಳೀಯ ಸುದ್ದಿಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಕಾರ್ಕಳ ಸಾಹಿತ್ಯ ಸಂಘ

ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಕಾರ್ಕಳ ಸಾಹಿತ್ಯ ಸಂಘ

ಅ. 16ರಂದು ಹೊಟೇಲ್ ಪ್ರಕಾಶ್‌ನಲ್ಲಿ ಸಮಾರಂಭ

ಕಾರ್ಕಳ : ಕಾರ್ಕಳ ಸಾಹಿತ್ಯ ಸಂಘವು ಬೆಳ್ಳಿ ಹಬ್ಬ ಸಂಭ್ರಮದಲ್ಲಿದ್ದು, ಅ. 16ರಂದು ಹೊಟೇಲ್‌ ಪ್ರಕಾಶ್‌ ಉತ್ಸವ ಸಭಾಂಗಣದಲ್ಲಿ ಸಮಾರಂಭ ನಡೆಯಲಿದೆ. ಸಂಜೆ 4 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮವನ್ನು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್‌ ಕುಮಾರ್‌ ಉದ್ಘಾಟಿಸಲಿರುವರು. ಮಂಗಳೂರು ಶ್ರೀ ರಾಮಕೃಷ್ಣ ಮಠದ ಶ್ರೀ ಜಿತಕಾಮಾನಂದಜೀ ಸ್ವಾಮೀಜಿ ಆಶೀರ್ವಚನ ನೀಡಲಿರುವರು. ಮುಂಬೈ ವಿವಿ ವಿಶ್ರಾಂತ ಪ್ರಾಧ್ಯಾಪಕ ಡಾ. ತಾಳ್ತಜೆ ವಸಂತ ಕುಮಾರ್‌ ಅಧ್ಯಕ್ಷತೆ ವಹಿಸಲಿದ್ದು, ಜಿ.ಎಸ್.‌ ನಟೇಶ್‌ ಶಿವಮೊಗ್ಗ ಅವರು ಮಂಕುತಿಮ್ಮನ ಕಗ್ಗದಲ್ಲಿ ಸಮನ್ವಯದ ಬದುಕು ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿರುವರು. ಬೆಳ್ಳಿ ಹಬ್ಬ ವರ್ಷಾಚರಣೆಯ ಕಾರ್ಯಕಾರಿ ಸಮಿತಿ ಅಧ್ಯಕ್ಷ, ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್‌ ಆಳ್ವ, ಕಾರ್ಯಾಧ್ಯಕ್ಷ ಆರ್. ತುಕಾರಾಮ ನಾಯಕ್, ಕೆ.ಪಿ. ಶೆಣೈ,‌ ಪ್ರಧಾನ ಕಾರ್ಯದರ್ಶಿ ಪ್ರೊ. ಬಿ. ಪದ್ಮನಾಭ ಗೌಡ, ಕೋಶಾಧಿಕಾರಿ ನಿತ್ಯಾನಂದ ಪೈ ಉಪಸ್ಥಿತರಿವರು ಎಂದು ಕಾರ್ಕಳ ಸಾಹಿತ್ಯ ಸಂಘ ಪ್ರಕಟನೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!