Tuesday, December 7, 2021
spot_img
Homeದೇಶಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ಆರೋಗ್ಯ ಸ್ಥಿರ : ಏಮ್ಸ್

ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ಆರೋಗ್ಯ ಸ್ಥಿರ : ಏಮ್ಸ್

ನವದೆಹಲಿ: ಅನಾರೋಗ್ಯದಿಂದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ -ಏಮ್ಸ್ ಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿರುವುದಾಗಿ ಆಸ್ಪತ್ರೆ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಬುಧವಾರ ಏಮ್ಸ್ ಗೆ ದಾಖಲಾಗಿದ್ದ  ಡಾ. ಮನ್ ಮೋಹನ್ ಸಿಂಗ್ ವೈದ್ಯಕೀಯ ನಿಗಾವಣೆಯಲ್ಲಿದ್ದಾರೆ. ಸುಸ್ತಿನ ಕಾರಣದಿಂದ 89 ವರ್ಷದ ಕಾಂಗ್ರೆಸ್ ಹಿರಿಯ ಮುಖಂಡರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ. ಈಗ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯಕೀಯ ನಿಗಾವಣೆಯಲ್ಲಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ.

ಇಂದು ಬೆಳಗ್ಗೆ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಆಸ್ಪತ್ರೆಗೆ ಭೇಟಿ ನೀಡಿ, ಡಾ. ಮನ್ ಮೋಹನ್ ಸಿಂಗ್ ಅವರ ಆರೋಗ್ಯ ವಿಚಾರಿಸಿದರು.

ಡಾ. ಮನ್ ಮೋಹನ್ ಸಿಂಗ್ ಅವರ ಆರೋಗ್ಯ ನಿನ್ನೆಗಿಂತ ಇಂದು ಉತ್ತಮವಾಗಿರುವುದಾಗಿ ಕಾಂಗ್ರೆಸ್ ವಕ್ತಾರ ಪ್ರಣವ್ ಜಾ ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!