Thursday, December 2, 2021
spot_img
Homeಕ್ರೀಡೆಟೀಮ್‌ ಇಂಡಿಯಾ ಹೆಡ್‌ ಕೋಚ್‌ ಆಗಿ ರಾಹುಲ್‌ ದ್ರಾವಿಡ್‌ ನೇಮಕ

ಟೀಮ್‌ ಇಂಡಿಯಾ ಹೆಡ್‌ ಕೋಚ್‌ ಆಗಿ ರಾಹುಲ್‌ ದ್ರಾವಿಡ್‌ ನೇಮಕ

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಭಾರತ ಕ್ರಿಕೆಟ್ ಮಂಡಳಿ ಬಿಸಿಸಿಐ, ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ರನ್ನು ಟೀಮ್ ಇಂಡಿಯಾ ಕೋಚ್ ಸ್ಥಾನಕ್ಕೆ ಮನವೊಲಿಸುವಲ್ಲಿ ಸಫಲವಾಗಿದೆ.

ಈ ಹಿಂದೆ ಈ ಸ್ಥಾನವನ್ನು ದ್ರಾವಿಡ್ ನಿರಾಕರಿಸಿದ್ದರ ಹೊರತಾಗಿಯೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜೈ ಶಾ ಅವರು ದುಬೈನಲ್ಲಿ ದ್ರಾವಿಡ್ ರನ್ನು ಭೇಟಿಯಾಗಿದ್ದರು. 

ದೀರ್ಘ ಕಾಲದ ಸಂಧಾನದ ನಂತರ ರಾಹುಲ್ ದ್ರಾವಿಡ್ 2 ವರ್ಷ ಅವಧಿಗೆ ಟೀಮ್ ಇಂಡಿಯಾ ಕೋಚ್ ಹುದ್ದೆ ನಿರ್ವಹಿಸಲು ಸಮ್ಮತಿ ಸೂಚಿಸಿದ್ದಾರೆ. 

ಸದ್ಯದ ಕೋಚ್ ರವಿ ಶಾಸ್ತ್ರಿ ವಿಶ್ವಕಪ್ ನಂತರ ಕೋಚ್ ಹುದ್ದೆಯಲ್ಲಿ ಮುಂದುವರಿಯುವುದಿಲ್ಲ ಎನ್ನುವುದು ಖಚಿತವಾಗುತ್ತಿದ್ದಂತೆಯೇ ಬಿಸಿಸಿಐ ರಾಹುಲ್ ದ್ರಾವಿಡ್ ರ ಬೆನ್ನು ಬಿದ್ದಿತ್ತು. 

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!