Tuesday, December 7, 2021
spot_img
Homeದೇಶಉತ್ತರಾಖಂಡ್ ಮಳೆ: ಮೃತರ ಸಂಖ್ಯೆ 16ಕ್ಕೆ ಏರಿಕೆ - ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದ ಪ್ರಧಾನಿ...

ಉತ್ತರಾಖಂಡ್ ಮಳೆ: ಮೃತರ ಸಂಖ್ಯೆ 16ಕ್ಕೆ ಏರಿಕೆ – ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ಮೋದಿ

ಡೆಹ್ರಾಡೂನ್: ಕಳೆದೆರಡು ದಿನಗಳಿಂದ ಉತ್ತರಾಖಂಡ್ ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಪ್ರವಾಹ, ಭೂ ಕುಸಿತದಿಂದಾಗಿ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಚಾರ್ ದಾಮ್ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. 

ಇಂದು ಬೆಳಗ್ಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಕರೆ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ ತಲೆದೋರಿಸುವ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ. 

ರಾಜ್ಯದಲ್ಲಿನ ಮಳೆ ಪರಿಸ್ಥಿತಿ ಬಗ್ಗೆ ಪ್ರಧಾನಿ ಮಾಹಿತಿ ಪಡೆದಿದ್ದು, ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ. ರಾಜ್ಯ ಸರ್ಕಾರ ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲಿದೆ ಎಂಬ ಆಶ್ವಾಸನೆ ನೀಡಿದ್ದೇನೆ. ಮೂರು ಹೆಲಿಕಾಫ್ಟರ್ ಗಳೊಂದಿಗೆ ನೆರವು ನೀಡುವಂತೆ ಭಾರತೀಯ ಸೇನೆಯನ್ನು ಕೇಳಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. 

 ನೈನಿತಾಲ್ ಜಿಲ್ಲೆಯ ಮುಕ್ತೇಶ್ವರ ಹಳ್ಳಿಯ ಚೌಕೌಟ ಬಳಿ ನಾಲ್ವರು ಮೃತಪಟ್ಟಿದ್ದು,  ರಾಜ್ಯದಾದ್ಯಂತ ಭೂ ಕುಸಿತದಿಂದಾಗಿ ಸೋಮವಾರದವರೆಗೂ ಆರು ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿತ್ತು.  13 ಜಿಲ್ಲೆಯಾದ್ಯಂತ ರಾಜ್ಯ ವಿಪತ್ತು ನಿರ್ವಹಣಾ ಪಡೆಯ 34 ತಂಡಗಳನ್ನು ರಾಜ್ಯ ಸರ್ಕಾರ ಈಗಾಗಲೇ ನಿಯೋಜಿಸಿದೆ. 

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!